ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆದರೆ, ಅದಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುವ ಲಕ್ಷಣಗಳು ಕಂಡು ಬರುತ್ತಿವೆ.
ಬೆಂಗಳೂರು(ಮೇ.29): ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ, ದಕ್ಷಿಣ ಒಳನಾಡಿನ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆದರೆ, ಅದಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುವ ಲಕ್ಷಣಗಳು ಕಂಡು ಬರುತ್ತಿವೆ. ಕಡಿಮೆಯಾಗಿರುವ ಮಳೆಯ ತೀವ್ರತೆ ಮಂಗಳವಾರದಿಂದ ಹೆಚ್ಚಾಗಲಿದೆ. ಮತ್ತೆ ಮೇ 31 ಹಾಗೂ ಜೂನ್ 1ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ. ಹೀಗಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ರೈತನ ಕೈ ಹಿಡಿಯುತ್ತಾ ರೋಹಿಣಿ ಮಳೆ?: ಭೂಮಿ ಹದಗೊಳಿಸಿ ಸಜ್ಜುಗೊಳಿಸಿದ ಅನ್ನದಾತ
ಉಳಿದಂತೆ ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಶನಿವಾರ ಹಾಸನದ ಬೇಲೂರು, ಮೈಸೂರಿನ ಹುಣಸೂರಿನಲ್ಲಿ ತಲಾ 2 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರಿನ ಕಳಸ, ಉತ್ತರ ಕನ್ನಡದ ಶಿರಾಲಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ರಾಯಚೂರಿನಲ್ಲಿ ರಾಜ್ಯದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 40.6 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.