Karnataka Rains: ಇಂದೂ ಕೂಡ ಕರ್ನಾಟಕದ ಹಲವೆಡೆ ಭಾರೀ ಮಳೆ

By Kannadaprabha NewsFirst Published Sep 12, 2022, 2:30 AM IST
Highlights

ಸೋಮವಾರದಿಂದ ಮಂಗಳವಾರ ಬೆಳಗ್ಗೆ 8.30ರ ತನಕ ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ 

ಬೆಂಗಳೂರು(ಸೆ.12): ರಾಜ್ಯದಲ್ಲಿ ಮಂಗಳವಾರದವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕೇಂದ್ರ ನೀಡಿದೆ. ಸೋಮವಾರ ಬೆಳಗ್ಗೆ 8.30ರ ತನಕ ಬೆಳಗಾವಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ.

ಸೋಮವಾರದಿಂದ ಮಂಗಳವಾರ ಬೆಳಗ್ಗೆ 8.30ರ ತನಕ ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮಂಗಳವಾರದಿಂದ ಶುಕ್ರವಾರದ ತನಕ ಭಾರಿ ಮಳೆಯ ಸಾಧ್ಯತೆಗಳಿಲ್ಲ ಎಂದು ಹವಾಮಾನ ಕೇಂದ್ರ ಹೇಳಿದೆ.

Karnataka Rains: ಬೆಳಿ ನೀರುಪಾಲಾಗೇತ್ರಿ, ನಿರೀಕ್ಷೆ ನುಚ್ಚುನೂರಾಗೇತ್ರಿ, ರೈತರ ಗೋಳು ಕೇಳೋರೇ ಇಲ್ಲ..!

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಕೊಟ್ಟಿಗೆಹಾರ 11 ಸೆಂ.ಮೀ, ಭಾಗಮಂಡಲ, ಜಯಪುರ, ಕಾಸಲ್‌ರಾಕ್‌ ತಲಾ 7, ಮಂಚಿಕೆರೆ 6, ಬೆಳ್ತಂಗಡಿ, ಉಡುಪಿ, ಕೊಲ್ಲೂರು, ಉಡುಪಿ, ನಿಪ್ಪಾಣಿ, ಬೀದರ್‌, ಜಾಲಹಳ್ಳಿ, ಮಡಿಕೇರಿಯಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.
 

click me!