ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು(ಆ.31): ಬಂಗಾಳ ಸಾಗರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇಂದಿನಿಂದ ಸೆ. 4 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 1 ರಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಪೂರ್ವ ಅರಬ್ಬೀ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳದ ಜಿಲ್ಲೆಗಳಲ್ಲಿ ಟ್ರಪ್ ಮುಂದುವರೆದಿದೆ. ಹೀಗಾಗಿ ಕರಾವಳಿ ತೀರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 4 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
Cyclone Asna: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ಗಣೇಶ ಚತುರ್ಥಿ 7 ಸೆಪ್ಟೆಂಬರ್ 2024 ರಂದು ಬಂದಿದೆ. 17 ಸೆಪ್ಟೆಂಬರ್ 2024 ರಂದು ಅನಂತ ಚತುರ್ದಶಿಯಂದು ಕೊನೆಗೊಳ್ಳುತ್ತದೆ. ಈ ದಿನ, ಗಣಪತಿಯ ನೀರಿನಲ್ಲಿ ವಿಸರ್ಜನೆ ಮಾಡುವ ಮೂಲಕ ಗಣಪತಿಗೆ ಬೀಳ್ಕೊಡಲಾಗುತ್ತದೆ.
ಗಣೇಶೋತ್ಸವಕ್ಕೆ ವರುಣ ಅಡ್ಡಿ?
ಗಣೇಶೋತ್ಸವದಂದು ರಾಜ್ಯಾದ್ಯಂತ ಎಲ್ಲ ಕಡೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತದೆ. ಆದರೆ, ಈ ಬಾರಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಸೆ. 5ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆ. 5 ರ ನಂತರವೂ ಮಳೆ ಹೀಗೆ ಮುಂದುವರಿದರೆ ಗಣೇಶೋತ್ಸವದಂದು ಆಯೋಜಿಸುವ ಕಾರ್ಯಕ್ರಮ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಅಡಚಡೆ ಉಂಟಾಗುವ ಸಾಧ್ಯತೆ ಇದೆ.