ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

By Kannadaprabha News  |  First Published Jun 2, 2024, 7:51 AM IST

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿಯೂ ಮಳೆ ಆರಂಭಗೊಂಡಿದೆ. ಆದರೆ, ರಾಜ್ಯಕ್ಕೆ ಮುಂಗಾರು ಪ್ರವೇಶದ ಬಗ್ಗೆ ಭಾನುವಾರ ಅಥವಾ ಸೋಮವಾರ ಅಧಿಕೃತ ಘೋಷಣೆಯಾಗು ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ ಹವಾಮಾನ ಇಲಾಖೆಯ ಅಧಿಕಾರಿಗಳು 


ಬೆಂಗಳೂರು(ಜೂ.02):  ಮುಂದಿನ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿಯೂ ಮಳೆ ಆರಂಭಗೊಂಡಿದೆ. ಆದರೆ, ರಾಜ್ಯಕ್ಕೆ ಮುಂಗಾರು ಪ್ರವೇಶದ ಬಗ್ಗೆ ಭಾನುವಾರ ಅಥವಾ ಸೋಮವಾರ ಅಧಿಕೃತ ಘೋಷಣೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Latest Videos

undefined

ಬೆಂಗಳೂರಿಗೆ 15 ದಿನ ಮೊದಲೇ ಮುಂಗಾರು ಪ್ರವೇಶ; ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ 11 ರಿಂದ 20 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಶನಿವಾರ ಬೆಂಗಳೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

click me!