ಹಿಂಗಾರು ಚುರುಕು: ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ

Published : Nov 20, 2023, 04:20 AM IST
ಹಿಂಗಾರು ಚುರುಕು: ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ

ಸಾರಾಂಶ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ, ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು(ನ.20):  ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ, ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಹಲವು ರಾಜ್ಯಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉಷ್ಣಾಂಶದಲ್ಲಿ ಹೆಚ್ಚಳ:

ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣ ಉಷ್ಣಾಂಶ ದಾಖಲಾದ ವರದಿಯಾಗಿದೆ. ಭಾನುವಾರ ಬಾದಾಮಿ (29.1), ಬಾಗಲಕೋಟೆ (29.5), ಬೆಂಗಳೂರು ನಗರದಲ್ಲಿ (26.9) ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಬೆಳಗಾವಿ (28.8), ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (27.6), ಎಚ್‌ ಎಎಲ್‌ (27) ಹಾಗೂ ಜಿಕೆವಿಕೆ (27.6), ಚಿತ್ರದುರ್ಗ( 28.3), ಧಾರವಾಡ(29.2), ಹಂಪಿ (29.1), ಕಲಬುರಗಿ (31.5), ಮಂಡ್ಯ(29.2) ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ