
ಬೆಂಗಳೂರು(ಅ.12): ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಪೂರ್ವ ಅರಬ್ಬೀ ಸಮುದ್ರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ಬಂಗಾಳ ಉಪ ಸಾಗರದ ಆಗ್ನೇಯ ಭಾಗದಲ್ಲಿ ಸರ್ಕ್ಯುಲೇಶನ್ 5.8 ಕಿ.ಮೀಟರ್ ಎತ್ತರದಲ್ಲಿದೆ. ಇದರ ಪ್ರಭಾವ ಅಕ್ಟೋಬರ್ 14 ರಂದು ಆಗ್ನೇಯ ಭಾಗದ ಉಪಸಾಗರದ ವಾಯುಭಾರ ಕುಸಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ವಿಜಯ ದಶಮಿ ದಿನವೇ ಅನ್ನದಾತರ ಬದುಕು ಮೂರಾಬಟ್ಟೆ: ಹಬ್ಬದ ಸಂಭ್ರಮ ಕಸಿದ ಮಹಾ ಮಳೆ!
ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 12 ರಿಂದ ಅಕ್ಟೋಬರ್ 15 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 16,17 ಹಾಗೂ 18 ರಂದು ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕಾರವಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅಕ್ಟೋಬರ್ 12ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 16 17 ರಂದು ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 12 ರಿಂದ 17 ರ ವರೆಗೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ