ಇಂದು ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಸಂಭವ

By Girish Goudar  |  First Published May 19, 2023, 1:15 PM IST

ಮೋಖಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕ್ಷೀಣಿಸಿತ್ತು. ಇದೀಗ ಮತ್ತೆ ಬರುವ ವಾತಾವರಣ ರೂಪುಗೊಳ್ಳುತ್ತಿದ್ದು, ಶುಕ್ರವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ. 


ಬೆಂಗಳೂರು(ಮೇ.19):  ಮುಂದಿನ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೋಖಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕ್ಷೀಣಿಸಿತ್ತು. ಇದೀಗ ಮತ್ತೆ ಬರುವ ವಾತಾವರಣ ರೂಪುಗೊಳ್ಳುತ್ತಿದ್ದು, ಶುಕ್ರವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

Latest Videos

undefined

Monsoon In India: ನಾಲ್ಕು ದಿನ ತಡವಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ, ಈ ವರ್ಷ ಸಾಮಾನ್ಯ ಮಳೆ!

ಕಲಬುರಗಿಯಲ್ಲಿ ಗುರುವಾರ 41.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ರಾಯಚೂರಿನಲ್ಲಿ 40.4 ಡಿಗ್ರಿ ಹಾಗೂ ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚು.

click me!