ಬಿಗ್ ನ್ಯೂಸ್: ಬಾರ್ ಓಪನ್ ಮಾಡುವಂತಿಲ್ಲ, ಆದ್ರೂ ಮದ್ಯ ಮಾರಾಟಕ್ಕೆ ಅನುಮತಿ

By Suvarna NewsFirst Published May 2, 2020, 5:19 PM IST
Highlights

ಬಾರ್ ಓಪನ್ ಮಾಡುವಂತಿಲ್ಲ, ಆದ್ರೂ ಮದ್ಯ ಮಾರಾಟಕ್ಕೆ ರಾಜ್ಯ ಅಬಕಾರಿ ಇಲಾಖೆ ಅನುಮತಿ ನೀಡಿದೆ. ಹಾಗಾದ್ರೆ ಮದ್ಯ ಎಲ್ಲಿಲ್ಲಿ ಸಿಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, ಮೇ 02: ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಮೇ.17ರ ವರೆಗೆ ವಿಸ್ತರಿಸಿದೆ.

"

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯವನ್ನು ರೆಡ್, ಆರೇಂಜ್ ಮತ್ತು ಗ್ರೀನ್ ಹೀಗೆ ಮೂರು ವಲಯಗಳನ್ನಾಗಿ ವಿಂಗಡನೆ ಮಾಡಲಾಗಿದೆ. ಕೇಂದ್ರದ ಮಾರ್ಗಸೂಚಿಯನ್ವಯ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 

ರಾಜ್ಯ ಸರ್ಕಾರದಿಂದ ಹೊಸ ಗೈಡ್‌ಲೈನ್ಸ್‌ ರಿಲೀಸ್: ಯಾವ ಝೋನ್‌ನಲ್ಲಿ ಏನಿರುತ್ತೆ? ಏನಿರಲ್ಲ?

ಹೊಸ ಮಾರ್ಗಸೂಚಿ ಅನ್ವಯ  ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಆದ್ರೆ, ರಾಜ್ಯ ಸರ್ಕಾರ ಕೆಲವಂದಿಷ್ಟು ಷರತ್ತುಗಳನ್ನು ವಿಧಿಸಿದೆ.

ಯಾವುದೇ ಕಾರಣಕ್ಕೂ ಬಾರ್ ತೆಗೆಯುವಂತೆಲ್ಲ. ಬದಲಾಗಿ ಮೇ.4ರಿಂದ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್ (MSIL)ಮತ್ತು ಎಂಆರ್‌ಪಿ (MRP) ಮೂಲಕ ಮದ್ಯ ಮಾರಾಟಕ್ಕೆ ರಾಜ್ಯ ಅಬಕಾರಿ ಇಲಾಖೆ ನಿರ್ಧರಿಸಿದೆ.

ಅದು ಕಂಟೇನ್ಮಂಟ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಝೋನ್‌ಗಳಲ್ಲಿ ಎಂಎಸ್‌ಐಎಲ್ (MSIL)ಮತ್ತು ಎಂಆರ್‌ಪಿ (MRP) ಶಾಪ್‌ಗಳಲ್ಲಿ ಮದ್ಯ ಮಾರಾಟಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಅಬಕಾರಿ ಸಚಿವ ಎಚ್‌.ನಾಗೇಶ್ ಅವರು ಸ್ಪಷ್ಟಪಡಿಸಿದರು.

ಈ ಬಗ್ಗೆ ರಾಜ್ಯ ಅಬಕಾರಿ ಇಲಾಖೆ ಇನ್ನೇನು ಅಧಿಕೃತ ಘೋಷಣೆ ಮಾಡುವುದೊಂದೆ ಬಾಕಿ ಇದೆ. ಈ ಮೂಲಕ ರಾಜ್ಯದಲ್ಲಿ ಮದ್ಯ ಮಾರಾಟ ಬಗ್ಗ ಇದ್ದ ಗೊಂದಲಗಳಿಗೆ ತೆರೆಬಿದ್ದಿದೆ.

click me!