Karnataka police : ಯೋಗ್ಯತೆ ಇಲ್ಲದ ಪೊಲೀಸರು ಯೂನಿಫಾರಂ ಬಿಚ್ಚಿಟ್ಟು ಸಾಯ್ರಿ : ಆರಗ ಜ್ಞಾನೇಂದ್ರ

Kannadaprabha News   | stockphoto
Published : Dec 04, 2021, 10:09 AM ISTUpdated : Dec 04, 2021, 10:43 AM IST
Karnataka police : ಯೋಗ್ಯತೆ ಇಲ್ಲದ  ಪೊಲೀಸರು ಯೂನಿಫಾರಂ ಬಿಚ್ಚಿಟ್ಟು ಸಾಯ್ರಿ : ಆರಗ ಜ್ಞಾನೇಂದ್ರ

ಸಾರಾಂಶ

 ‘ಈ ರೀತಿ ದನ ರೆಗ್ಯುಲರ್ ಕಳ್ಳಸಾಗಾಣಿಕೆ ಮಾಡುವವರು ಯಾರೆಂದು ನಿಮ್ಮವರಿಗೆ ಗೊತ್ತಿರುತ್ತೆ ಲಂಚ ತಿನ್ಕೊಂಡು ಅವರ ಜೊತೆ ಬಿದ್ದಿರ್ತಾರೆ ನಾಯಿ ಹಂಗೆ. ಎಂಜಲು ಕಾಸಿಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡ ಪರಿ

ಶಿವಮೊಗ್ಗ (ಡಿ.04):   ‘ಈ ರೀತಿ ದನ ರೆಗ್ಯುಲರ್ ಕಳ್ಳ ಸಾಗಾಣಿಕೆ ಮಾಡುವವರು ಯಾರೆಂದು ನಿಮ್ಮವರಿಗೆ ಗೊತ್ತಿರುತ್ತೆ. ಲಂಚ (Bribe) ತಿನ್ಕೊಂಡು ಅವರ ಜೊತೆ ಬಿದ್ದಿರ್ತಾರೆ ನಾಯಿ ಹಂಗೆ. ಎಂಜಲು ಕಾಸಿಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಯೋಗ್ಯತೆ ಇಲ್ಲ ದಿದ್ದರೆ ಯೂನಿಫಾರಂ ಬಿಚ್ಚಿಟ್ಟು ಸಾಯ್ರಿ ಮನೆ ಕಡೆ.’ - ಅಕ್ರಮ ಗೋ ಸಾಗಣೆ ಮತ್ತು ಗೋ ಕಳ್ಳರು ಹೆಚ್ಚುತ್ತಿರುವ ವಿಚಾರವಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು (Senior Police Officer ) ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga jnanendra) ತರಾಟೆಗೆ ತೆಗೆದುಕೊಂಡ ಪರಿಯಿದು. 

ಗೃಹ ಸಚಿವರ ಕ್ಷೇತ್ರದಲ್ಲಿ ಗೋ ಕಳ್ಳರನ್ನು ತಡೆಯಲು ಬಂದ ಹಿಂದೂಪರ ಸಂಘಟನೆಯ ಇಬ್ಬರು ಕಾರ್ಯಕರ್ತರ ಮೇಲೆ ವಾಹನ ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಇಲಾಖೆಯ ವಿರುದ್ಧ ಕೆಂಡಾ ಮಂಡಲವಾಗಿರುವ ವೀಡಿಯೋ ಇದೀಗ ವೈರಲ್ ಆಗಿದೆ. ‘ಈ ರೀತಿ ದನ ರೆಗ್ಯುಲರ್ ಕಳ್ಳ ಸಾಗಾಣಿಕೆ ಮಾಡುವವರು ಯಾರೆಂದು ನಿಮ್ಮವರಿಗೆ ಗೊತ್ತಿರುತ್ತೆ. 

ಲಂಚ ತಿನ್ಕೊಂಡು ಅವರ ಜೊತೆ ಬಿದ್ದಿರ್ತಾರೆ ನಾಯಿ (Dog) ಹಂಗೆ. ಪೊಲೀಸರಿಗೊಂದು (police) ಆತ್ಮ ಗೌರವ ಬೇಕಲ್ಲವಾ? ನಾನು ಗೃಹ ಸಚಿವನಾಗಿ(Home Minister) ಇರಬೇಕೋ ಬೇಡವೋ? ನಿಮ್ಮದು ಚಿಕ್ಕಮಗಳೂರು (Chikkamagaluru) ಜಿಲ್ಲೆ, ನನ್ನದು ಶಿವಮೊಗ್ಗ ಜಿಲ್ಲೆ(Shivamogga). ಕೆಟ್ಟು ಹಾಳಾಗಿ ಹೋಗಿದ್ದಾರೆ ಎಲ್ಲ ಪೊಲೀಸ್ರು. ಇಲಾಖೆ ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದೆ. ಸಂಬಳದಲ್ಲಿ ಬದುಕಲು ಆಗದ ಸ್ಥಿತಿಯೇನೂ ಇಲ್ಲ. ಆದರೂ ಎಂಜಲು ಕಾಸಿಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. 

ಯೋಗ್ಯತೆ ಇಲ್ಲದಿದ್ದರೆ ಯೂನಿಫಾರಂ ಬಿಚ್ಚಿಟ್ಟು ಸಾಯ್ರಿ ಮನೆ ಕಡೆ.’ ‘ಕೊಟ್ಟಿಗೆ ಬಂದು ತಲವಾರು ತೋರಿಸಿ ಜಾನುವಾರು ಹೊತ್ತೊಯ್ಯುತ್ತಾರೆ ಎಂದರೆ ಹೇಗೆ?’  ಹೀಗೆ ಆಕ್ರೋಶ ಭರಿತವಾಗಿ ಮಾತುಗಳನ್ನು ಆಡಿದ್ದಾರೆ. ಗೃಹ ಸಚಿವರು ಎಲ್ಲಿ ಈ ಮಾತು ಆಡಿದ್ದಾರೆ, ಯಾರ ಜೊತೆ ಮಾತನ್ನಾಡಿದ್ದಾರೆ ಎಂದು ಗೊತ್ತಿಲ್ಲ. ಆದರೆ ತೀರ್ಥಹಳ್ಳಿಯಲ್ಲಿ(Thirthahalli) ಬೆಂಬಲಿಗರ, ಮುಖಂಡರ ಜೊತೆ ಕಚೇರಿಯಲ್ಲಿ ಈ ಮಾತು ಆಡಿದ್ದಾರೆ ಎನ್ನಲಾಗಿದೆ.

 ನಾಲ್ಕು ದಿನಗಳ ಹಿಂದೆ ತೀರ್ಥಹಳ್ಳಿಯ ಕುಡು ಮಲ್ಲಿಗೆ ಸಮೀಪ ಪಿಕಪ್ ವಾಹನವೊಂದರಲ್ಲಿ ಗೋವುಗಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಸುದ್ದಿ ತಿಳಿದು ಹಿಂದೂಪರ ಸಂಘಟನೆ ಸೋದರರಿಬ್ಬರು ಈ ಕಳ್ಳರ ವಾಹನ (Vehicle) ಚೇಸ್ ಮಾಡಿ ತಡೆಯಲೆತ್ನಿಸಿದ್ದರು. ಈ ವೇಳೆಯಲ್ಲಿ ಇಬ್ಬರು ಕಳ್ಳರು ಇವರ ಬೈಕ್ ಮೇಲೆ ವಾಹನ ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದ ಗಾಯಾಳುಗಳನ್ನು ಸಚಿವರಾದ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.  

ಅಂದು ರೌಡಿ ರಾಜ್ಯ ಈಗ ಶಾಂತ ರಾಜ್ಯ : ಒಂದು ಕಾಲದಲ್ಲಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ(Law and Order) ಹೇಗಿತ್ತು ಎಂಬುದನ್ನು ನೆನಪು ಮಾಡಿಕೊಳ್ಳಬೇಕು. ದಿನ ಬೆಳಗಾದರೆ ಬೀದಿಗಳಲ್ಲಿ ಕೊಲೆಗಳಾಗುತ್ತಿದ್ದವು. ಆದರೆ ಇವತ್ತು ಅಂಥ ಪರಿಸ್ಥಿತಿ ಇಲ್ಲ. ಕೆಲ ಸಣ್ಣಪುಟ್ಟಘಟನೆಗಳ ಹೊರತು ನಗರ ಶಾಂತವಾಗಿದೆ. ಅಂದು ರೌಡಿ ರಾಜ್ಯ ಇತ್ತು. ಈಗ ಕಾನೂನು ಮತ್ತು ಸುವ್ಯವಸ್ಥೆಯ ರಾಜ್ಯ ಇದೆ. ರಾಷ್ಟ್ರ ಮಟ್ಟದ ಪ್ರತಿಷ್ಠಿತ ನಿಯತಕಾಲಿಕವೊಂದು ಕರ್ನಾಟಕವು ದೇಶದಲ್ಲೇ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದೆ ಎಂದು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್‌.ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹಾಗೂ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಗೋವಿಂದರಾಜ ನಗರ ಠಾಣೆ ಮಂಜೂರು ನನ್ನ ಕೊನೆ ಆದೇಶ

ನಾನು ಗೃಹ ಸಚಿವನಾಗಿ ಸಹಿ ಮಾಡಿದ ಕೊನೆಯ ಆದೇಶವೇ ಗೋವಿಂದರಾಜ ನಗರ ಠಾಣೆ ಮಂಜೂರಾತಿ ಆಗಿತ್ತು. ಅತ್ಯುನ್ನತ ಮಟ್ಟದಲ್ಲಿ ಪೊಲೀಸ್‌ ಠಾಣೆಯನ್ನು ಸೋಮಣ್ಣ ನವರು ಬಹಳ ಮುತುವರ್ಜಿವಹಿಸಿ ನಿರ್ಮಿಸಿದ್ದಾರೆ. ಹೊಸ ಗೃಹ ಸಚಿವರನ್ನು ಕರೆದುಕೊಂಡು ಹೋಗಿ ಠಾಣೆ ಉದ್ಘಾಟಿಸುವಂತೆ ಹೇಳಿದ್ದೆ. ಆದರೆ ಕೊನೆಗೆ ನಾನೇ ಸಂಪುಟದ ಸಹೋದ್ಯೋಗಿಗಳ ಜತೆ ಬಂದು ಠಾಣೆಯನ್ನು ಉದ್ಘಾಟಿಸಿದ್ದು ಸಂತೋಷವಾಗಿದೆ ಎಂದು ಮುಖ್ಯಮಂತ್ರಿಗಳು ನುಡಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು