ಬುಧವಾರದಿಂದ ಬೆಂಗಳೂರು ಅನ್‌ಲಾಕ್‌: ಲಾಕ್‌ಡೌನ್‌ ವಿಸ್ತರಣೆ ಇಲ್ಲ!

By Kannadaprabha News  |  First Published Jul 21, 2020, 7:38 AM IST

ನಾಳೆಯಿಂದ ಬೆಂಗಳೂರು ಅನ್‌ಲಾಕ್‌| ಲಾಕ್‌ಡೌನ್‌ ವಿಸ್ತರಣೆ ಇಲ್ಲ| ನಗರ, ಗ್ರಾಮಾಂತರದಲ್ಲಿ ಎಂದಿನಂತೆ ಜನಜೀವನ| ಸಂಡೇ ಲಾಕ್‌ಡೌನ್‌, ರಾತ್ರಿ ಕರ್ಫ್ಯೂ ಬಗ್ಗೆ ಇಂದು ಹೊಸ ಮಾರ್ಗಸೂಚಿ ಪ್ರಕಟ


ಬೆಂಗಳೂರು(ಜು.21): ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಲಾಕ್‌ಡೌನ್‌ ವಿಸ್ತರಣೆ ಆಗುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ. ಹೀಗಾಗಿ ಬುಧವಾರದಿಂದ ಜನಜೀವನ ಹಾಗೂ ಆರ್ಥಿಕ ಚಟುವಟಿಕೆಗಳು ಎಂದಿನಂತೆ ಆರಂಭವಾಗುವ ನಿರೀಕ್ಷೆಯಿದೆ.

ಹಾಲಿ ಜಾರಿಯಲ್ಲಿರುವ ಬುಧವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಆದರೆ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರ ಲಾಕ್‌ಡೌನ್‌ಗೆ ಸಂಬಂಧಿಸಿದ ಈ ಹಿಂದಿನ ಆದೇಶಗಳು ಎಂದಿನಂತೆ ಜಾರಿಯಿರುತ್ತವೆ. ಲಾಕ್‌ಡೌನ್‌ ಅಂತ್ಯಗೊಳ್ಳುವ ಕುರಿತು ಮಂಗಳವಾರ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

Tap to resize

Latest Videos

ಆತಂಕದ ನಡುವೆ ಶುಭಸುದ್ದಿ: ಕರ್ನಾಟಕದಲ್ಲಿ ಶೇಕಡ ಸೋಂಕು ಇಳಿಮುಖ!

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಬೆಂಗಳೂರಿನ ಸಚಿವರು, ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರ ಜತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವಿಸ್ತೃತ ಮಾಹಿತಿಯನ್ನು ಪಡೆದುಕೊಂಡರು. ಜತೆಗೆ, ಲೌಕ್‌ಡೌನ್‌ ಅವಧಿಯಲ್ಲಿ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.

click me!