
ಬೆಂಗಳೂರು(ಡಿ25): ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜನರು ಪ್ರವಾಸಿತಾಣಗಳಿಗೆ ಲಗ್ಗೆ ಇಡುತ್ತಿದ್ದು, ರಾಜ್ಯದ ಪ್ರಸಿದ್ಧ ಪ್ರವಾಸಿತಾಣಗಳಲ್ಲಿನ ಲಾಡ್ಜ್, ರೆಸಾರ್ಟ್, ಹೋಂಸ್ಟೇಗಳು ಈಗಾಗಲೇ ಬಹುತೇಕ ಭರ್ತಿಯಾಗಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಮಾಲೀಕರು ಬಾಡಿಗೆಯನ್ನು ಏಕಾಏಕಿ ಏರಿಸಿದ್ದು, ಕೆಲವೆಡೆ 2-3 ಪಟ್ಟು ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ 80 ನೋಂದಾಯಿತ ಹೋಂಸ್ಟೇಗಳು, ಮಂಗಳೂರಿನಲ್ಲಿ ಅಸೋಸಿಯೇಷನ್‌ನಿಂದ ಸದಸ್ಯತ್ವ ಪಡೆದ 100ಕ್ಕೂ ಅಧಿಕ ಹೋಟೆಲ್‌ಗಳಿದ್ದು, ಜನವರಿ 2ರವರೆಗೆ ಎಲ್ಲವೂ ಮುಂಗಡ ಬುಕ್ಕಿಂಗ್ ಆಗಿವೆ. ಹೋಟೆಲ್‌ಗಳಲ್ಲಿನ ಬಾಡಿಗೆ 2.5 ಸಾವಿರ ರು.ನಿಂದ 5-8 ಸಾವಿರ ರು.ವರೆಗೆ ಏರಿಕೆಯಾಗಿದೆ. ಇನ್ನು, ಗೋಕರ್ಣ, ಹಂಪಿ, ಮುರುಡೇಶ್ವರ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿನ ವಸತಿಗೃಹಗಳು ಬಹುತೇಕ ಭರ್ತಿಯಾಗಿವೆ.
Bengaluru: ಹೊಸ ವರ್ಷಕ್ಕೆ ಉಗ್ರರ ಕರಿನೆರಳು: ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ
ಕೊಡಗು, ದಾಂಡೇಲಿ ಸೇರಿದಂತೆ ಕೆಲ ಪ್ರವಾಸಿತಾಣಗಳಲ್ಲಿನ ರೆಸಾರ್ಚ್‌ಗಳಲ್ಲಿ ದಿನವೊಂದರ ಬಾಡಿಗೆ ದರ 20 ಸಾವಿರ ರು.ಗೂ ಹೆಚ್ಚಾಗಿದೆ. ಇಲ್ಲಿನ ಊಟ, ತಿಂಡಿ ಬೆಲೆಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ರೆಸಾರ್ಚ್‌ಗಳಲ್ಲಿನ ಟೆಂಟ್ ಬಾಡಿಗೆ 250 ರು.ಗಳಿಂದ 600-700 ರು.ಗೆ ಏರಿಕೆಯಾಗಿದೆ. 5-7 ಸಾವಿರ ರು. ಇದ್ದ ಡಿಜೆ ಬಾಡಿಗೆ 6-7 ಸಾವಿರ ರು.ಗೆ ಏರಿಕೆಯಾಗಿದೆ. ಮೈಸೂರಿನ ಹೋಟೆಲ್‌ಗಳಲ್ಲಿ ದರವನ್ನು ಶೇ.20 ರಿಂದ 25 ರಷ್ಟುಹೆಚ್ಚಳ ಮಾಡಲಾಗಿದೆ. ಇದೇ ವೇಳೆ, ಖಾಸಗಿ ಟೂರಿಸ್ಟ್ ಬಸ್‌ಗಳು ಕೂಡ ಪ್ರಯಾಣ ದರವನ್ನು ದುಪ್ಪಟ್ಟು ಹೆಚ್ಚಳ ಮಾಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ