
ಕನಕಪುರ (ಮಾ.25): ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆ ನನಗೆ ಆತ್ಮವಿಶ್ವಾಸ ಹಿಮ್ಮಡಿಗೊಳಿಸಿದೆ. ಉರಿಬಿಸಲಿನಲ್ಲೂ ಜನರು ಕಿಕ್ಕಿರಿದು ತುಂಬಿದ್ದರು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ ತಿಳಿಸಿದರು.
ಇಂದು ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಹುಮ್ಮಸ್ಸು ನೋಡಿದರೆ ನನ್ನ ಗೆಲುವು 100ರಷ್ಟು ಖಚಿತವಾಗಿದೆ. ಕನಕಪುರದಲ್ಲಿ ಅತಿ ಹೆಚ್ಚು ಮತಗಳಿಂದ ಗೆಲ್ಲಲಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಬಿಜೆಪಿ-ಜೆಡಿಎಸ್ ಅತಿ ಹೆಚ್ಚು ಮತಗಳನ್ನು ಗಳಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲು ಹಣವಿಲ್ಲ ಎಂದಿದ್ರು: ಲಕ್ಷ್ಮಣ್ ಸವದಿ ವಾಗ್ದಾಳಿ
ಇದೇ ವೇಳೆ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವಿನ ಸ್ಪರ್ಧೆ ರಾಮ-ರಾವಣ ನಡುವಿನ ಯುದ್ಧ ಎಂಬಂತೆ ಶಾಸಕ ಮುನಿರತ್ನ ಹೇಳಿಕೆ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ, ನಾನು ಆ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದರು.
ಮಂಜುನಾಥ್ ಅವರಿಗೆ ಕ್ಷೇತ್ರ ಪರಿಚಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನನಗೆ ಕ್ಷೇತ್ರ ಪರಿಚಯ ಇಲ್ಲದೇ ಇರಬಹುದು ಆದರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತೀರಿಸುತ್ತೇವೆ ಅಂತಾ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಹೀಗಾಗಿ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎನ್ನುವ ಮೂಲಕ ಗೆಲ್ಲುವುದು ಖಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಗಂಡಸರು ಇಲ್ವಾ?: ಲಕ್ಷ್ಮಣ ಸವದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ