
ಶಿವಮೊಗ್ಗ (ಏ.1): ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಏತ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಬಿಜೆಪಿ ಆಡಳಿತಾವಧಿಯಲ್ಲಿ ಆಗಿವೆ. ಬಿಎಸ್ ವೈ ಸರ್ಕಾರ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡುವ ಮೂಲಕ ವಿದ್ಯಾವಂತ ರಾಗಲು ಸಹಕಾರ ನೀಡಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ನುಡಿದರು.
ಇಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕನ್ನು ನೀಡಲು ಸಂಸದ ರಾಘವೇಂದ್ರ ರಿಂದ ಮಾತ್ರ ಸಾಧ್ಯ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಒಗ್ಗಟ್ಟಾಗಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಯಾವ ರಾಜಕೀಯ ನಾಯಕರೂ ನನ್ನಷ್ಟು ಮದುವೆ ಸಮಾರಂಭಗಳಿಗೆ ಹೋಗಿಲ್ಲ: ಎಚ್‌ಡಿ ಕುಮಾರಸ್ವಾಮಿ
ಇನ್ನು ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಗೀತಾ ಶಿವರಾಜ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ಮಾಡಲು ಕ್ಷೇತ್ರದ ಜನರು ಎಲ್ಲಿಗೆ ಹೋಗಬೇಕು? ಬೆಂಗಳೂರಿಗೆ ಹೋಗಬೇಕ? ನಾವು ಬಂಗಾರಪ್ಪ ಮತ್ತು ರಾಜ್‌ಕುಮಾರ್ ಕುಟುಂಬಕ್ಕೆ ಗೌರವ ಕೊಡುತ್ತೇವೆ. ಆದರೆ ಗೀತಾ ಶಿವರಾಜ್ ಕುಮಾರ ರಾಜಕಾರಣಕ್ಕೆ ಬಂದು ಡಾ. ರಾಜ್ ಕುಟುಂಬದ ಮರ್ಯಾದೆ ಕಳೆದಿದ್ದಾರೆ ಎಂದು ಕಿಡಿಕಾರಿದರು.
'ಈ ಮೋಕ ನಂದು ಗೆದ್ದುಕೋ ನೋಡೋಣ..' ಶ್ರೀರಾಮುಲು ವಿರುದ್ಧ ಸಿನಿಮಾ ಶೈಲಿಯಲ್ಲಿ ಸೆಡ್ಡು ಹೊಡೆದ ಸಚಿವ ನಾಗೇಂದ್ರ!
ನಮ್ಮ ಕೈಗೆ ಸಿಗದ ಕಾಂಗ್ರೆಸ್ ಅಭ್ಯರ್ಥಿ(ಗೀತಾ ಶಿವರಾಜ್ ಕುಮಾರ್) ನಮಗೆ ಬೇಡ. ಸದಾ ನಮ್ಮ ಜೊತೆಗೆ ಇರುವ ರಾಘಣ್ಣ ನಮಗೆ ಬೇಕು. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ