
ಚಾಮರಾಜನಗರ (ಏ.11): ಸಿಎಂ ಸಿದ್ದರಾಮಯ್ಯ ಮತದಾರರ ಕಿವಿಗೆ ಹೂ ಇಡುವ ಕೆಲಸ ಮಾಡ್ತಿದ್ದಾರೆ. ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ಮೀಸಲಾಗಿದ್ದ 24 ಸಾವಿರ ಕೋಟಿ ಅನುದಾನವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಆ ಮೂಲಕ ಎಸ್ಸಿ ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಕೊಳ್ಳೇಗಾಲದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ಕೊಡ್ತೀವಿ ಅಂತಾರೆ. ಇನ್ನೊಂದು ಕಡೆ ಮದ್ಯದ ದರ ಶೇ.100ರಷ್ಟು ಏರಿಕೆ ಮಾಡಿದ್ದಾರೆ. ಒಂದು ಕೈಲಿ ಕೊಟ್ಟು ಇನ್ನೊಂದು ಕೈಲಿ ಕಿತ್ತುಕೊಳ್ಳುವ ಕೆಲಸ ಮಾಡ್ತಿದ್ದಾರೆ. ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ
ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 2.93 ಲಕ್ಷ ಕೋಟಿ ತೆರಿಗೆ ಪಾಲು ಕೊಟ್ಟಿದೆ. ಆದರೆ 2004 ರಿಂದ2014 ರವರೆಗೆ ಯುಪಿಎ ಅವಧಿಯಲ್ಲಿ ಕೇವಲ 80 ಸಾವಿರ ಕೋಟಿ ತೆರಿಗೆ ಪಾಲು ಬಂದಿತ್ತು. ಕಳೆದ 10 ವರ್ಷಗಳಲ್ಲಿ ವಿವಿಧ ಯೋಜನೆಗಳಿಗೆ ಎನ್‌ಡಿಎ ಸರ್ಕಾರ 2.36 ಲಕ್ಷ ಕೋಟಿ ಅನುದಾನ ಕೊಟ್ಟಿದೆ. ಆದರೆ ಯುಪಿಎ ಸರ್ಕಾರದ ಅವಧಿ 10 ವರ್ಷಗಳ ಅವಧಿಯಲ್ಲಿ ಕೇವಲ 60 ಸಾವಿರ ಕೋಟಿ ಅನುದಾನ ನೀಡಿತ್ತು ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ