ಮದ್ಯ ಖರೀದಿಗೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯ; ಕೊಡಗಿನಲ್ಲಿ ಒಟ್ಟು ಮತದಾರರೆಷ್ಟು?

Published : Mar 17, 2024, 07:13 PM IST
ಮದ್ಯ ಖರೀದಿಗೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯ; ಕೊಡಗಿನಲ್ಲಿ ಒಟ್ಟು ಮತದಾರರೆಷ್ಟು?

ಸಾರಾಂಶ

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಎರಡನೇ ಹಂತದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜನರು ಚುನಾವಣಾ ನೀತಿ ಸಂಹಿತೆ, ನಿಯಮಗಳನ್ನು ಪಾಲಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ. 

ರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಮಾ.17): ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಎರಡನೇ ಹಂತದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಇದೀಗ ವಿಶೇಷ ಹಬ್ಬ ಹರಿದಿನಗಳು ನಡೆಯುತ್ತಿವೆ. ಹಬ್ಬ, ಉತ್ಸವ, ಜಾತ್ರೆಗಳಲ್ಲಿ ಮನೆಗಳಲ್ಲಿ ಹೆಚ್ಚಿನ ಮದ್ಯ ಬಳಕೆ ಸಾಮಾನ್ಯ ವಾಡಿಕೆ. ಆದರೆ ಹೆಚ್ಚಿನ ಮದ್ಯ ಖರೀದಿಸಬೇಕೆಂದರೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡುವುದಕ್ಕೆ ಕಡ್ಡಾಯವಾಗಿ ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿರಬೇಕು. ಹೆಚ್ಚು ಜನ ಸೇರುವ ಯಾವುದೇ ಕಾರ್ಯಕ್ರಮವಾಗಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಜನರು ಈ ನಿಯಮಗಳನ್ನು ಪಾಲಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ. 

 

ಕೊಡಗು: ಚುನಾವಣಾ ಪ್ರಚಾರ ಅಖಾಡಕ್ಕಿಳಿದ ಯದುವೀರ್ ಒಡೆಯರ್; ಜನಸಾಮಾನ್ಯರಂತೆ ಸರದಿ ನಿಂತು ಊಟ ಮಾಡಿದ ರಾಜ ವಂಶಸ್ಥ!

ಜೊತೆಗೆ ಸುಳ್ಳು ಸುದ್ದಿಗಳನ್ನು ಹರಡುವುದು, ಕೋಮುಸೌಹಾರ್ದತೆ ಹಾಳಾಗುವಂತಹ ಸಂದೇಶಗಳನ್ನು ಹರಡುವುದನ್ನು ನಿಷೇಧಿಸಲಾಗಿದೆ. ಇಂತಹ ಕೃತ್ಯಗಳು ಕಂಡು ಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ. 

ಇನ್ನು ಜಿಲ್ಲೆಯಲ್ಲಿ ಜಮ್ಮಾ ಹಿಡುವಳಿದಾರರ ಬಳಿ ಬಂದೂಕುಗಳಿದ್ದು ಕಳೆದ 5 ವರ್ಷಗಳಲ್ಲಿ ಯಾವುದಾದರೂ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವವರು ಕಡ್ಡಾಯವಾಗಿ ಕೋವಿಗಳನ್ನು ಠೇವಣಿ ಇಡಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗವು ‘ಸಿ ವಿಜಿಲ್’ ಎಂಬ ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಿದ್ದು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಆ್ಯಪ್ನಲ್ಲಿ ವಿಡಿಯೊ ಮತ್ತು ಚಿತ್ರಗಳ ಮೂಲಕ ದೂರು ಸಲ್ಲಿಸಬಹುದು ಎಂದರು. 

ಟೀಕೆ, ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2 ವಿಧಾನಸಭಾ ಕ್ಷೇತ್ರಗಳು ಸೇರಲಿದ್ದು, ಮಡಿಕೇರಿ ಕ್ಷೇತ್ರದಲ್ಲಿ 2,36,562 ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ 2,29,592 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪುರುಷ ಮತದಾರರ ಸಂಖ್ಯೆ 2,28,478, ಮಹಿಳಾ ಮತದಾರರ ಸಂಖ್ಯೆ 2,37,660 ಹಾಗೂ ತೃತೀಯ ಲಿಂಗಿ ಮತದಾರರ ಸಂಖ್ಯೆ 16 ಆಗಿದ್ದು, ಒಟ್ಟು 4,66,154 ಮತದಾರರು ಇದ್ದಾರೆ. ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅರ್ಹರು ಈಗಲೂ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು ಎಂದರು. ಜಿಲ್ಲೆಯಲ್ಲಿ ಒಟ್ಟು 1,357 ಸೇವಾ ಮತದಾರರು, 4,411 ಅಂಗವಿಕಲ ಮತದಾರರು ಹಾಗೂ 85 ವರ್ಷ ದಾಟಿದ 5,686 ಮತದಾರರು ಇದ್ದಾರೆ. 85 ವರ್ಷ ದಾಟಿದವರು ಬಯಸಿದರೆ ಮನೆಯಲ್ಲೆ ಮತದಾನ ಮಾಡುವ ಅವಕಾಶವೂ ಇದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಗ್ಯಾಸ್ ಸಿಲಿಂಡರ್ ಸ್ಫೋಟ - ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು