
ಕೊಡಗು (ಮಾ.17): ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ. ಈ ನಡುವೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಗಡಿಯಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಕಡಮಕಲ್ಲು ಬಳಿಯ ಕೂಜಿಮಲೆ ಬಳಿಯ ರಬ್ಬರ್ ಎಸ್ಟೇಟ್‌ನಲ್ಲಿ 8 ಜನರಿದ್ದ ನಕ್ಸಲರ ತಂಡ ಕಾಣಿಸಿಕೊಂಡಿರುವುದರಿಂದ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ..
ನಿನ್ನೆ ಸಂಜೆ ಕಾಲೂರು ಗ್ರಾಮದ ಕೂಜಿಮಲೆಗೆ ಬಂದು ಅಲ್ಲಿನ ಅಂಗಡಿಯೊಂದರಲ್ಲಿ ಸುಮಾರು 4000 ರುಪಾಯಿಯಷ್ಟು ದಿನಸಿ ವಸ್ತುಗಳನ್ನು ಕೊಂಡೊಯ್ದಿರುವ ನಕ್ಸಲರು. ಡಿಜಿಟಲ್ ಪೇ ಮಾಡದೇ ಅಂಗಡಿಯಲ್ಲಿ ನಗದು ನೀಡಿ ಸಾಮಗ್ರಿ ಖರೀದಿಸಿ ಹೋಗಿದ್ದಾರೆ.
ಮದ್ಯ ಖರೀದಿಗೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯ; ಕೊಡಗಿನಲ್ಲಿ ಒಟ್ಟು ಮತದಾರರೆಷ್ಟು?
6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಕಾಣಿಸಿಕೊಂಡಿರುವ ಕೆಂಪು ಉಗ್ರರು. ಲೋಕಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿ ನಕ್ಸಲರು ಪ್ರತ್ಯಕ್ಷರಾಗಿರುವುದು ಪೊಲೀಸರು ಹೈಅಲರ್ಟ್ ಆಗಿದ್ದಾರೆ.. ಗುತ್ತಿಗಾರು, ಕೊಲ್ಲಮೊಗರು, ಕಲ್ಮಕರ್, ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್. 2012 ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದ ನಕ್ಸಲರು. ಮತ್ತೊಮ್ಮೆ 2012 ರ ಫೆಬ್ರವರಿ ತಿಂಗಳಿನಲ್ಲಿ ಇದೆ ವ್ಯಾಪ್ತಿ ಸಂಪಾಜೆ ಗುಡ್ಡೆಗದ್ದೆಯಲ್ಲಿ ಪ್ರತ್ಯಕ್ಷಗೊಂಡಿದ್ದ ತಂಡ ಇದೀಗ ಆರು ವರ್ಷಗಳ ಬಳಿಕ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ನಕ್ಸಲರು ಪ್ರತ್ಯಕ್ಷವಾಗಿರುವ ಹಿನ್ನೆಲೆ ಕೊಡಗು ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ