
ಮೈಸೂರು (ಜ.22): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬಾರದಿದ್ದರೆ, ಚೀನಾ ಹಾಗೂ ಪಾಕಿಸ್ತಾನ ಭಾರತದ ಗಡಿ ನುಗ್ಗಲಿದೆ ಎಂದು ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪುನರಾಯ್ಕೆಯಾದರೆ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯ. ಎನ್‌ಡಿಎಯನ್ನು ಮತ್ತೆ ಅಧಿಕಾರಕ್ಕೆ ತರದಿದ್ದರೆ ಚೀನಾ ಮತ್ತು ಪಾಕಿಸ್ತಾನಗಳು ನಮ್ಮ ಗಡಿಗೆ ನುಗ್ಗುತ್ತವೆ ಎಂದು ಹೇಳಿದರು.
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಕಟಾವಿಗೆ ಬಂದ ಕಬ್ಬಿನ ಗದ್ದೆ ಬೆಂಕಿಗಾಹುತಿ!
ಇದೇ ವೇಳೆ ಪ್ರಧಾನಿ ಮೋದಿ ಅವರ ಕನಸಿನ ಕಾರ್ಯಕ್ರಮಗಳಾಗ ಪಿಎಂ ಸ್ವನಿಧಿ ಹಾಗೂ ಪಿಎಂ ವಿಶ್ವಕರ್ಮ ಯೋಜನೆಗಳ ಕುರಿತು ಮಾತನಾಡಿದ ಅವರು, ಯೋಜನೆಗಳು ರಾಜ್ಯದಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಹೇಳಿದರು.
ಯೋಜನೆಗೆ ರಾಜ್ಯವೊಂದರಲ್ಲೇ 21 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ, ದೇಶದಾದ್ಯಂತ 63 ಲಕ್ಷ ಜನರು ನೋಂದಾಯಿಸಿಕೊಂಡಿದ್ದಾರೆ, ಇದರಿಂದಾಗಿ ಪಟ್ಟಿಯಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದರು.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಅಪ್ರಾಪ್ತ ಮುಸ್ಲಿಂ ಯುವಕನಿಂದ ಉದ್ರೇಕಕಾರಿ ಸಂದೇಶ!
ಬಳಿಕ ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಬಲಿಸರು ಬಯಸಿದ್ದು ನಿಜ. ಆದರೆ, ನಾನು ಟಿಕೆಟ್ ಆಕಾಂಕ್ಷಿಯಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಹಾಗೂ ಮಂಡ್ಯ ಕ್ಷೇತ್ರಗಳನ್ನು ಒಗ್ಗೂಡಿಸ ಕ್ಲಸ್ಟರ್ ಎಂದು ರಚಿಸಲಾಗಿದೆ. ಇದರ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ. ಅಲ್ಲಿ ಎನ್'ಡಿಎ ಅಭ್ಯರ್ಥಿಗಲನ್ನು ಗೆಲ್ಲಿಸಲು ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ಕೆಲಸ ಮಾಡುತ್ತೇನೆಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ