ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣದಲ್ಲಿ ಮೊದಲ ಬಾರಿಗೆ ಲೋಕಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು(ಅ.01): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ಸಂಬಂಧ ಮುಂದಿನ ತನಿಖೆ ಪ್ರಕ್ರಿಯೆ ಕುರಿತು ಲೋಕಾಯುಕ್ತ ಮುಖ್ಯಸ್ಥರ ಜತೆ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಮಾ ಲೋಚನೆ ನಡೆಸಿದ್ದು, ಸಿದ್ದರಾಮಯ್ಯಗೆ ನೊಟೀಸ್ ಜಾರಿ ಮಾಡಬಹುದು ಎನ್ನಲಾಗಿದೆ.
ಸೋಮವಾರ ನಗರದ ಲೋಕಾ ಯುಕ್ತ ಮುಖ್ಯ ಕಚೇರಿಗೆ ಆಗಮಿ ಸಿದ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ. ಜೆ. ಉದೇಶ್ ಅವರು ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೀಕರ್‌ರನ್ನು ಭೇಟಿ ಮಾಡಿ ತನಿಖೆ ಪ್ರಕ್ರಿಯೆ ಕುರಿತು ವಿಸ್ತ್ರತವಾಗಿ ಚರ್ಚೆ ನಡೆಸಿದರು. ತನಿಖೆಯ ಪ್ರಾಥಮಿಕ ಹಂತದ ಪ್ರಕ್ರಿಯೆ ಗಳನ್ನು ಪೂರ್ಣಗೊಳಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡುವ ನಿರೀಕ್ಷೆ ಇದೆ.
undefined
ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆವರೆಗೂ ಹೋರಾಟ, ಆರ್.ಅಶೋಕ್
ಸಿದ್ದರಾಮಯ್ಯ ಸೇರಿದಂತೆ ಪ್ರಕರಣದಲ್ಲಿರುವವರನ್ನು ಸಹ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಜನಪ್ರತಿನಿಧಿಗಳ ವಿಶೇಷನ್ಯಾಯಾಲಯದ ಆದೇಶ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ತನಿಖೆಯ ಮುಂದಿನ ಪ್ರಕ್ರಿಯೆಗಳನ್ನು ಕೈ ಗೊಳ್ಳಬೇಕಿದೆ. ಯಾವರೀತಿಯಲ್ಲಿ ತನಿಖೆಯನ್ನು ನಡೆಸಬೇಕು? ಕಾನೂನು ತಜ್ಞರ ಅಭಿಪ್ರಾಯದ ಮೇರೆಗೆ ಮುಂದಿನ ಹೆಜ್ಜೆ ಇಡುವುದು ಸೇರಿದಂತೆ ಹಲವು ವಿಚಾರಣಗಳ ಕುರಿತು ಸಮಾಲೋಚನೆ ನಡೆಸಲಾಗಿದೆ. ಮುಡಾ ಹಗರಣ ಸಂಬಂಧಪಟ್ಟ ದಾಖಲೆಗಳನ್ನು ಕ್ರೋಢೀಕರಿಸಿ ಮುಂದಿನ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮುಡಾ ಕೇಸಲ್ಲಿ ಲೋಕಾದಿಂದ ಮೊದಲ ನೋಟಿಸ್ ಜಾರಿ
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣದಲ್ಲಿ ಮೊದಲ ಬಾರಿಗೆ ಲೋಕಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇದೀಗ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸೋಮವಾರ ನೋಟಿಸ್ ನೀಡಿದ್ದಾರೆ. ಬೆಳಗ್ಗೆ 7:30ಕ್ಕೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ವಾಟ್ಸ್ ಆ್ಯಪ್ ಮೂಲಕ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.