ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸಿಬಿಐ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ಬೆಂಗಳೂರು (ಆ.22): ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಪ್ರಕರಣ ಒಂದು ಕಡೆಯಾದರೆ. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಕಷ್ಟ ಎದುರಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಇಬ್ಬರಿಗೂ ಕಾನೂನು ಸಂಕಷ್ಟದಲ್ಲಿದ್ದಾರೆ.
ಅಕ್ರಮ ಹಣ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಇವತ್ತೇ ಹಾಜರಾಗಬೇಕೆಂದು ನೋಟಿಸ್ ನೀಡಿದ ಹಿನ್ನೆಲೆ ಡಿವೈಎಸ್ಪಿ ಸತೀಶ್ ಅವರ ಮುಂದೆ ವಿಚಾರಣೆಗೆ ಡಿ.ಕೆ.ಶಿವಕುಮಾರ್ ಹಾಜರಾದರು. ಒಂದು ವಾರದ ಹಿಂದೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ನಿನ್ನೆ ಮತ್ತೊಮ್ಮೆ ಲೋಕಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನಲ್ಲಿ ತಿಳಿಸಿತ್ತು.
ಬೆಂಗಳೂರಿಗರಿಗೆ ಶಾಕ್! ನಾನು ನೀರಿನ ಬಿಲ್ ಹೆಚ್ಚಳ ಮಾಡೇ ಮಾಡುತ್ತೇನೆ: ಡಿಕೆ ಶಿವಕುಮಾರ್
ಕ್ಯಾಬಿನೆಟ್ ಸಭೆ ಮುಗಿದ ಬಳಿಕ ಡಿಕೆಶಿ ವಿಚಾರಣೆಗೆ ಹಾಜರಾದರು. ಸಿಬಿಐ ಇಂದ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿತ್ತು. ಪ್ರಾಸಿಕ್ಯೂಷನ್ ಅನುಮತಿ ವಾಪಸ್ಸು ಪಡೆದುಕೊಂಡಿದ್ರು, ಅನುಮತಿ ವಾಪಸ್ಸಾತಿಯನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ನಡೆಯಲಿದೆ.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಆದಾಯಕ್ಕೆ ಮೀರಿ ₹74.93 ಕೋಟಿ ಮೌಲ್ಯದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಈ ಪ್ರಕರಣ ಸಂಬಂಧ 2019ರಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಸಿಬಿಐ ಪ್ರಕರಣ ದಾಖಲು ಮಾಡಿತ್ತು. ಮತ್ತು ಆಗ ವಿಚಾರಣೆಗೆ ಅನುಮತಿ ನೀಡಲಾಗಿತ್ತು.
ಗೌರಿ ಲಂಕೇಶ್ ಹತ್ಯೆ: ಮೋಹನ್ ನಾಯಕ್ ಜಾಮೀನು ರದ್ದತಿಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾ
ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಪ್ರಕರಣದ ತನಿಖೆಯ ಅನುಮತಿಯನ್ನು ವಾಪಸ್ಸು ತೆಗೆದುಕೊಂಡು ಲೋಕಾಯುಕ್ತ ತನಿಖೆಗೆ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಬಸವನಗೌಡ ಪಾಟೀಲ ಯತ್ನಾಳ್ ಅವರು ವಿರೋಧಿಸಿ ಅನುಮತಿಯನ್ನು ವಾಪಸ್ಸು ಪಡೆದಿರುವುದು ಕಾನೂನು ಬಾಹಿರ ಎಂದು ಅರ್ಜಿ ಸಲ್ಲಿಸಿದ್ದರು. ಇದರ ಜೊತೆಗೆ ಲೋಕಾಯುಕ್ತಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಿರುವುದನ್ನು ಸಿಬಿಐ ಕೂಡ ಪ್ರಶ್ನಿಸಿತ್ತು. ಈ ಎರಡು ಅರ್ಜಿಗಳು ಕೂಡ ಸದ್ಯ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಜೊತೆಗೆ ವಿಚಾರಣೆ ಬಹುತೇಕ ಮುಕ್ತಾಯಗೊಂಡು ಆದೇಶ ಬರುವುದು ಬಾಕಿ ಇದೆ.
ಇದೆಲ್ಲದರ ನಡುವೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಕರೆದಿದ್ದು, ಡಿಕೆಶಿ ಹೇಳಿಕೆ ಪಡೆಯಲು ಮುಂದಾಗಿದೆ.