ಅಕ್ರಮ ಆಸ್ತಿ: ಸಚಿವ ಜಮೀರ್ ಅಹ್ಮದ್‌ಗೆ ಲೋಕಾ ಬುಲಾವ್‌

Published : Nov 16, 2024, 04:23 AM IST
ಅಕ್ರಮ ಆಸ್ತಿ: ಸಚಿವ ಜಮೀರ್ ಅಹ್ಮದ್‌ಗೆ ಲೋಕಾ ಬುಲಾವ್‌

ಸಾರಾಂಶ

ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್‌ಪೆಕ್ಟ‌ರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್‌ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲ ಯದ (ಇ.ಡಿ.) ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. 

ಬೆಂಗಳೂರು(ನ.16):  ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದಾರೆ.

ನಗರದಲ್ಲಿರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್‌ಪೆಕ್ಟ‌ರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್‌ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲ ಯದ (ಇ.ಡಿ.) ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. 

ಅಂದು ಆಪ್ತಮಿತ್ರರು, ಈಗ ಬದ್ಧಶತ್ರುಗಳು: ಗುರುಪುತ್ರನ ವಿರುದ್ಧವೇ ತಿರುಗಿ ಬಿದ್ದರೇಕೆ ಜಮೀರ್?

ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗಲು ಸಚಿವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 

ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್‌ ಅವರಿಗೆ ಲೋಕಾಯುಕ್ತ ಪೊಲೀಸರು ಹೇಳಿರುವುದಾಗಿ ತಿಳಿದು ಬಂದಿದೆ. ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀ‌ಅವರಿಗೆ ಮತ್ತೆ ಪೊಲೀಸರ ತನಿಖೆ ಬಿಸಿ ಎದುರಾಗಿದ್ದು, ತಮ್ಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಅಧಿಕ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಬರಲು ಸಚಿವರಿಗೆ ಕಾಲಾವಕಾಶ ನೀಡಲಾಗಿದೆ. 

ಮೂರು ವಾರ ಸಮಯದಲ್ಲಿ ಅವರು ಪುರಾವೆ ಸಂಗ್ರಹಿಸಿ ಬರಲಿ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ. ತಪ್ಪು ಮಾಹಿತಿ ನೀಡಿದ್ದರೆ ಲೆಕ್ಕಪರಿಶೋಧನೆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಮೂಲಗಳು ಹೇಳಿವೆ. 

ಗೌಡ್ರ ಕುಟುಂಬ ಖರೀದಿಗೆ ಜಮೀರ್‌ಗೆ ಪಾಕಿಸ್ತಾನದಿಂದ ದುಡ್ಡು ಬಂದಿದ್ಯಾ?: ಆರ್.ಅಶೋಕ್

ಈ ಹಿಂದೆ ಇದೇ ಪ್ರಕರಣ ವಿಚಾರವಾಗಿ ಜಮೀ‌ಅವರನ್ನು ಕೂಡಎಸಿಬಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು. ಅಲ್ಲದೆ ಸಚಿವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ ಇನ್ನಿತರ ಸ್ಥಳಗಳ ಮೇಲೆ ಎಸಿಬಿ ದಾಳಿ ಸಹ ನಡೆಸಿ ದಾಖಲೆಗಳನ್ನು ಸಂಗ್ರಹಿಸಿತ್ತು. ಈಗ ಲೋಕಾಯುಕ್ತ ಪೊಲೀಸರ ತನಿಖೆಯನ್ನು ಜಮೀರ್‌ಎದುರಿಸಬೇಕಿದೆ.

ಸಚಿವ ಸುಧಾಕ‌ರ್ ಲೋಕಾ ವಿಚಾರಣೆ 

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕು ಮಾ‌ರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತು ಸಚಿವ ಡಿ.ಸುಧಾಕರ್ ರನ್ನು ಲೋಕಾಯುಕ್ತರು ವಿಚಾರಣೆ ನಡೆ ಸಿದ್ದಾರೆ. ಸುಧಾಕರ್‌ರಿಂದ ಡಿಕೆಶಿ ಸಾಲ ಪಡೆದಿದ್ದೇನೆ ಎಂದಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ