
ಬೆಂಗಳೂರು(ಫೆ.14): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಲೋಕಾಯುಕ್ತ ಸಂಸ್ಥೆ ಎಫ್‌ಐಆರ್ ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಈ ಬಗ್ಗೆ ಸಿಬಿಐನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಮೂಲಗಳು ಹೇಳಿವೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಚಿವರು, ಶಾಸಕರೊಂದಿಗೆ ಡಿಕೆಶಿ ಸಭೆ: ಕಾರಣವೇನು?
ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಲೋಕಾಯುಕ್ತಕ್ಕೆ ದೂರು ದಾಖಲಿಸಿ ತನಿಖೆ ನಡೆಸುವ ಬಗ್ಗೆ ಸೂಚನೆ ನೀಡಿದೆ. ಡಿ.26ರಂದು ನಿರ್ದೇಶನ ನೀಡಲಾಗಿದ್ದು, ಲೋಕಾಯುಕ್ತ ಪೋಲಿಸರು ಫೆ.8ರಂದು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಕಾನೂನಾತ್ಮಕವಾಗಿ ಇಲ್ಲ ಎಂದು ಸರ್ಕಾರ ಸಮಜಾಯಿಷಿ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ