ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

Published : Apr 24, 2023, 08:46 AM ISTUpdated : Apr 24, 2023, 09:00 AM IST
ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ಸಾರಾಂಶ

ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೀದರ್, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು (ಏ.24): ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೀದರ್, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆ ಮುಂದುವರೆಸಿದ್ದಾರೆ.

ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಪೊಲೀಸರ ದಾಳಿ: ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ. ಜೊತೆಗೆ ಸುರೇಶ್ ಮೇದಾ ಸಣ್ಣ ನೀರಾವರಿ ಇಲಾಖೆ ಎಕ್ಸಿಕ್ಯುಟಿವ್ ಇಂಜಿನಿಯರ್ ನಿವಾಸ ಹಾಗೂ ಕಚೇರಿ ಮೇಲೆ ಹಾಗೂ ಬೀದರ್‌ನ ಗುರುನಗರದ ನಿವಾಸ ಹಾಗೂ ನೌಬಾದ್‌ನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಎನ್.ಎಂ‌.ಓಲೇಕಾರ್‌ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರ, ಹಗರಣದಿಂದಲೇ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌: ರಾಜೀವ್‌ ಚಂದ್ರಶೇಖರ್‌

ಕೋಲಾರ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮನೆ ಮೇಲೆ ದಾಳಿ: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಂಗಾರಪೇಟೆ ಪಟ್ಟಣದಲ್ಲಿ ಮೂರು ಕಡೆ, ಮುಳಬಾಗಿಲು ತಾಲ್ಲೂಕು ತಿಪ್ಪದೊಡ್ಡಿ ಎರಡು ಕಡೆ ದಾಳಿ ನಡೆಸಿದ್ದಾರೆ. ಒಟ್ಟು ವೆಂಕಟೇಶಪ್ಪಗೆ ಸೇರಿದ ಐದು ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದು, ಕಳೆದ‌ ಎಂಟು ವರ್ಷಗಳಿಂದ ಬಂಗಾರಪೇಟೆ ತಾಲ್ಲೂಕು ಪಂಚಾಯ್ತಿ ಇಓ ಆಗಿ ವೆಂಕಟೇಶಪ್ಪ ಕೆಲಸ ಮಾಡುತ್ತಿದ್ದರು. ಎರಡು ದಿನಗಳ‌ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆಯಾದ್ದ ವೆಂಕಟೇಶಪ್ಪ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲಾತಿಗಳ ಪರಿಶೀಲನೆ ಮುಂದುವರೆಸಿದ್ದಾರೆ.

ಬಳ್ಳಾರಿಯ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಬಳ್ಳಾರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಜೆಸ್ಕಾಂ ಅಧಿಕಾರಿ ಹುಸೇನ್ ಸಾಬ್‌ಗೆ ಸೇರಿದ ಬಳ್ಳಾರಿ ಮತ್ತು ಹೊಸಪೇಟೆಯ ನಿವಾಸ ಸೇರಿ ಒಟ್ಟು ಆರು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬಳ್ಳಾರಿಯ ರಾಘವೇಂದ್ರ ಕಾಲೋನಿಯ ಮನೆ, ಹೊಸಪೇಟೆ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ‌ ಸಂಪಾದನೆ ಮಾಡಿದ ಆರೋಪದ ಮೇಲೆ ಡಿವೈಎಸ್ಪಿ ರಾಮರಾವ್ ನೇತೃತ್ವದಲ್ಲಿ ಬಳ್ಳಾರಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಶಿವಮೊಗ್ಗದ ನಿವೃತ್ತ ಡಿಸಿಎಫ್‌ಐಎಂ ಮನೆ ಮೇಲೆ ದಾಳಿ: ಶಿವಮೊಗ್ಗದ ನಿವೃತ್ತ ಡಿಸಿಎಫ್‌ಐಎಂ ನಾಗರಾಜ್ ಮನೆ ಫಾರಂ ಹೌಸ್ ಕಾಂಪ್ಲೆಕ್ಸ್‌ಗಳ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಕಾಂಪ್ಲೆಕ್ಸ್ ಮತ್ತು ಮನೆ, ಅನುಪಿನ ಕಟ್ಟೆಯಲ್ಲಿರುವ ವಿಸ್ಮಯ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಕಲ್ಲೂರು ಮಂಡಳಿ ಬಳಿ ಇರುವ ಫ್ಯಾಕ್ಟರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದ್ದು, ಸದ್ಯ ಶಿವಮೊಗ್ಗದ ವನ್ಯಜೀವಿ ವಿಭಾಗದ ಡಿಸಿಎಫ್ ಆಗಿ ನಾಗರಾಜ್ ನಿವೃತ್ತರಾಗಿದ್ದಾರೆ. ದಾವಣಗೆರೆ ಲೋಕಾಯುಕ್ತ ಇನ್ಸ್ಪೆಕ್ಟರ್ ಆಂಜನೇಯ ಸೇರಿದಂತೆ ಮೂವರು ಲೋಕ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಯುತ್ತಿದೆ. ಇನ್ನು ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಹೊಳಲ್ಕೆರೆ ತಹಸಿಲ್ದಾರ್ ನಾಗರಾಜ್‌ರವರ ಶಿವಮೊಗ್ಗ ಮತ್ತು ಶಿಕಾರಿಪುರ ನಿವಾಸದ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ಶಿಕಾರಿಪುರದ ಚನ್ನಕೇಶವ ನಗರದಲ್ಲಿರುವ ತಹಸಿಲ್ದಾರ್ ನಿವಾಸ, ಶಿಕಾರಿಪುರ, ಹೊನ್ನಾಳಿ, ಚನ್ನಗಿರಿ, ಶಿವಮೊಗ್ಗ ಪ್ರಸ್ತುತ ಹೊಳಲ್ಕೆರೆಯಲ್ಲಿ ತಹಸಿಲ್ದಾರ್ ಆಗಿ ನಾಗರಾಜ್ ಕಾರ್ಯ ನಿರ್ವಹಿಸುತ್ತಿದ್ದಾರೆ 

ಬಿಎಸ್‌ವೈಯನ್ನು ಜೈಲಿಗೆ ಕಳಿಸಿದ್ದು ಆರೆಸ್ಸೆಸ್‌: ಸಿದ್ದರಾಮಯ್ಯ

ಮಾಜಿ ಸಚಿವ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಜಿ ಸಚಿವ ಗಂಗಾಧರ ಗೌಡ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ. ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರ ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ಐಟಿ ದಾಳಿ ನಡೆಸಲಾಗಿದ್ದು, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟುನಲ್ಲಿರುವ ಮನೆ ಮೇಲೆ ಉತ್ತರ ಭಾರತ ಮೂಲದ 20 ಕ್ಕೂ ಅಧಿಕ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಬಿಗ್‌ಬಾಸ್ ಶೋ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌