Mysuru Lokayukta Raid: 3 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಚೆಸ್ಕಾಂ ಎಇಇ!

Published : Jun 18, 2025, 06:02 PM IST
Lokayukta raid Mysuru CESC AEE engeneers trapped while accepting bribe

ಸಾರಾಂಶ

ಮೈಸೂರಿನಲ್ಲಿ ಚೆಸ್ಕಾಂನ ಎಇಇ ದೀಪಕ್ 3 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಧಿಕೃತ ವಿದ್ಯುತ್ ಸಂಪರ್ಕ ದಂಡ ಕಡಿಮೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೈಸೂರು (ಜೂ.18): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎ.ಇ.ಇ.) ಹಾಗೂ ವಿಜಿಲೆನ್ಸ್ ಅಧಿಕಾರಿ ದೀಪಕ್, 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಮೈಸೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಲಂಚ ಪಡೆಯುವಾಗ ಈ ಕಾರ್ಯಾಚರಣೆ ನಡೆದಿದ್ದು, ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮ್ಯಾಥ್ಯು ಥಾಮಸ್ ಮತ್ತು ಇನ್ಸ್‌ಪೆಕ್ಟರ್ ರವಿಕುಮಾರ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪ್ರಕರಣದ ವಿವರ:

ಅನಧಿಕೃತ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ದಂಡದ ಮೊತ್ತವನ್ನು ಕಡಿಮೆ ಮಾಡಲು ಆರೋಪಿ ದೀಪಕ್ ವ್ಯಕ್ತಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಯೋಜಿತ ಕಾರ್ಯಾಚರಣೆ ನಡೆಸಿ, ದೀಪಕ್‌ನನ್ನು 3 ಲಕ್ಷ ರೂಪಾಯಿ ನಗದು ಸ್ವೀಕರಿಸುವ ವೇಳೆಯೇ ಬಂಧಿಸಿ, ಸ್ವೀಕರಿಸಿದ ಮೂರು ಲಕ್ಷ ರೂ. ನಗದನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದ್ದು, ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌