ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಚಳಿ ಬಿಡಿಸಿದ ಲೋಕಾ ದಾಳಿ: ಕೋಟ್ಯಂತರ ರೂ. ಮೌಲ್ಯದ ವಸ್ತು ಪತ್ತೆ

By Girish GoudarFirst Published Dec 5, 2023, 8:51 AM IST
Highlights

13 ಅಧಿಕಾರಿಗಳಿಗೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ನಡೆಸಿದ್ದು, ಸುಮಾರು 200 ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆಸಿ ಶೋಧಕಾರ್ಯ ಆರಂಭಿಸಿದ್ದಾರೆ.

ಬೆಂಗಳೂರು(ಡಿ.05): ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
13 ಅಧಿಕಾರಿಗಳಿಗೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ನಡೆಸಿದ್ದು, ಸುಮಾರು 200 ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ಮಾಡಿ ದಾಖಲಗಲನ್ನ ಪರಿಶೀಲನೆ ನಡೆಸಲಾಗುತ್ತಿದೆ.

ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆಸಿ ಶೋಧಕಾರ್ಯ ಆರಂಭಿಸಿದ್ದಾರೆ.  ಬೆಂಗಳೂರುಲ್ಲಿ 3 ಕಡೆ, ಕಲಬುರಗಿ, ಬೀದರ್-2 ಕಡೆ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ದಾಳಿ ನಡೆಸಲಾಗಿದೆ. 

Latest Videos

ನೋಟಿಸ್ ನೀಡಿದ್ರೂ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳು; ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ!

ಬೆಂಗಳೂರಿನ ಬೆಸ್ಕಾಂ ಇಇ ಚೆನ್ನಕೇಶವ ಅವರ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರಿನಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ. ದಾಳಿ ವೇಳೆ 6 ಲಕ್ಷ ನಗದು, 3 ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ಡೈಮಂಡ್ ಜುವೆಲರಿ, ಸೇರಿ 1.5 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. 

ಕಲಬುರಗಿಯಲ್ಲಿರುವ ಯಾದಗಿರಿ ಡಿಎಚ್‌ಓ ಡಾ. ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ದಾಳಿ ನಡೆಸಲಾಗಿದೆ.  ಅಕ್ರಮ ಆಸ್ತಿ ಗಳಿಗೆ ಆರೋಪದ ಮೇಲೆ ಯಾದಗಿರಿ ಡಿಎಚ್‌ಓ ಡಾ. ಪ್ರಭುಲಿಂಗ್ ಮಾನಕರ್‌ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮುಂದುವರಿದ ಲೋಕಾಯುಕ್ತ ದಾಳಿ

ಕುಂಬಳಗೋಡು ಹಾಲು ಸಹಕಾರ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್. ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಕುಂಬಳಗೂಡು ಸೇರಿದಂತೆ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

11 ಭೂಮಾಪನ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಬಳ್ಳಾಪುರದಲ್ಲಿ ರಾಮನಗರ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮುನೇಗೌಡ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಮೂರು ಕಡೆ ಲೋಕಾಯುಕ್ತ ದಾಳಿ ಮಾಡಲಾಗಿದೆ. ಫಾಲಿ ಹೌಸ್ ಗಳಲ್ಲಿ ಅಕ್ರಮ ಎಸಗಿರೋ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. 

ಬೀದರ್‌ನಲ್ಲಿ ಪಶು ವಿಶ್ವವಿದ್ಯಾಲಯದ ನಿವೃತ್ತ ಉಪ ಕುಲಪತಿಗಳಾದ ಹೆಚ್.ಡಿ‌ ನಾರಾಯಣಸ್ವಾಮಿ ಮನೆ ಮೇಲೆ ಬೆಂಗಳೂರು ‌ಮನೆಯ ಮೇಲೆ ಬೀದರ್‌ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.  ಬೀದರರ್‌ ಪಶು ವೈಧ್ಯಕೀಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಸುನೀಲ‌ ಪಾಟೀಲ‌ ಮನೆ ಮತ್ತು‌ ಕಾಂಪ್ಲೆಕ್ಸ್ ಮೇಲೂ‌ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಸಂಬಂಧ ಸುನೀಲ ಪಾಟೀಲ್ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನೆಡೆಸಿದ್ದಾರೆ. 

click me!