
ಯಾದಗಿರಿ:(ಅ.3): ಇ-ಖಾತಾ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಯಾದಗಿರಿ ನಗರಸಭೆ ಅಧಿಕಾರಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಯಾದಗಿರಿ ನಗರಸಭೆ ಕಚೇರಿಯ ಬಿಲ್ ಕಲೆಕ್ಟರ್ ಆಗಿರುವ ನರಸಪ್ಪ ಲೋಕಾಬಲೆಗೆ ಬಿದ್ದಿರುವ ಅಧಿಕಾರಿ. ಇ-ಖಾತಾ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇ-ಖಾತಾಗೆ 8 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಭ್ರಷ್ಟ:
ನರಸಪ್ಪ ಇ-ಖಾತಾ ಸೌಲಭ್ಯಕ್ಕಾಗಿ ಅರ್ಜಿದಾರ ಶಶಿಕುಮಾರ್ ಬಳಿ 8,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮುಂಗಡವಾಗಿ 5 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದರು. 5,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ಜೆ.ಎಚ್. ಇನಾಂದಾರ್, ಪಿಐ ಸಿದ್ದರಾಯ ಮತ್ತು ಸಂಗಮೇಶ ನೇತೃತ್ವದ ತಂಡವು ದಾಳಿ ನಡೆಸಿತು. ಈ ವೇಳೆ ಲಂಚದ ಹಣ ಸಹಿತ ನರಸಪ್ಪನನ್ನು ವಶಕ್ಕೆ ಪಡೆಯಲಾಯಿತು. ದಾಳಿಯ ಬಳಿಕ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಯಿಂದ ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂಬ ಸಾರ್ವಜನಿಕ ಆರೋಪಗಳಿಗೆ ಮತ್ತಷ್ಟು ಬಲಗೊಂಡಿವೆ. ಲೋಕಾಯುಕ್ತ ತಂಡವು ತನಿಖೆಯನ್ನು ಮುಂದುವರೆಸಿದ್ದು, ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ಧತೆ ನಡೆಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ