ಲಂಚ ಪಡೆವಾಗ ಲೋಕಾ ದಾಳಿ : ಸಚಿವ ಜಾರ್ಜ್‌ ಒಎಸ್‌ಡಿ ಅರೆಸ್ಟ್‌

Kannadaprabha News   | Kannada Prabha
Published : Oct 05, 2025, 05:06 AM IST
Lokayukta Raids in Chitradurga Dr Venkatesh Anjan Murthy Face Corruption Probe

ಸಾರಾಂಶ

ವಿದ್ಯುತ್‌ ಮಂಜೂರಾತಿ ಸಂಬಂಧ ನಿರಾಕ್ಷೇಪಣಾ ಪತ್ರ(ಎನ್‌ಒಸಿ) ನೀಡಲು 50 ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು : ವಿದ್ಯುತ್‌ ಮಂಜೂರಾತಿ ಸಂಬಂಧ ನಿರಾಕ್ಷೇಪಣಾ ಪತ್ರ(ಎನ್‌ಒಸಿ) ನೀಡಲು 50 ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಇಂಧನ ಸಚಿವರ ಒಎಸ್‌ಡಿ ಹಾಗೂ ಕೆಪಿಟಿಸಿಎಲ್‌ ಕಾರ್ಯ ನಿರ್ವಾಹಕ ಎಂಜಿನಿಯರ್‌ ಜ್ಯೋತಿ ಪ್ರಕಾಶ್‌(50) ಮತ್ತು ಅವರ ಕಾರು ಚಾಲಕ ನವೀನ್‌(34) ಬಂಧಿತರು. ಬ್ಯಾಡರಹಳ್ಳಿ ಕೆಂಪೇಗೌಡ ನಗರ ನಿವಾಸಿ ಕೆ.ಎಂ.ಅನಂತರಾಜು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಲಂಚ ಸ್ವೀಕರಿಸುವ ವೇಳೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

1 ಲಕ್ಷ ರು. ಲಂಚಕ್ಕೆ ಬೇಡಿಕೆ:

ಅನಂತರಾಜು ಅವರು ಡಿ.ಆರ್‌. ಡೆವಲಪರ್ಸ್‌ಗೆ ವಿದ್ಯುತ್‌ ಮಂಜೂರಾತಿ ಪಡೆಯಲು ಕೆಪಿಟಿಸಿಎಲ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಎನ್‌ಒಸಿ ನೀಡಲು ಕೆಪಿಟಿಸಿಎಲ್‌ ಕಾರ್ಯ ನಿರ್ವಾಹಕ ಎಂಜಿನಿಯರ್‌ ಜ್ಯೋತಿ ಪ್ರಕಾಶ್‌ 1 ಲಕ್ಷ ರು. ಲಂಚಕ್ಕೆ ಬೇಡಿಕೆ ಇರಿಸಿದ್ದರು. ಲಂಚ ನೀಡಲು ನಿರಾಕರಿಸಿದ ಅನಂತರಾಜು, ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಶನಿವಾರ ದೂರುದಾರ ಅನಂತರಾಜು ಅವರಿಂದ 50 ಸಾವಿರ ರು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!