ಲೋಕಸಭಾ ಚುನಾವಣೆ: ಇಂದು ವರಿಷ್ಠರ ಜೊತೆ ಸಿದ್ದರಾಮಯ್ಯ, ಡಿಕೆಶಿ ರಣತಂತ್ರ ಸಭೆ!

Published : Jan 04, 2024, 05:26 AM IST
ಲೋಕಸಭಾ ಚುನಾವಣೆ: ಇಂದು ವರಿಷ್ಠರ ಜೊತೆ ಸಿದ್ದರಾಮಯ್ಯ, ಡಿಕೆಶಿ ರಣತಂತ್ರ ಸಭೆ!

ಸಾರಾಂಶ

ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜ.4 ಮತ್ತು 5ರಂದು ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರು (ಡಿ.4) : ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜ.4 ಮತ್ತು 5ರಂದು ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಈಗಾಗಲೇ ಚುನಾವಣಾ ತಯಾರಿ ಆರಂಭಿಸಿರುವ ಕಾಂಗ್ರೆಸ್, ಚುನಾವಣೆ ಕಾರ್ಯ ತಂತ್ರಗಳ ಕುರಿತು ಚರ್ಚಿಸಲು ಎಲ್ಲ ರಾಜ್ಯಗಳ ಪ್ರಮುಖ ನಾಯಕರ ಸಭೆ ಕರೆದಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದೆ.

ಕಾಂಗ್ರೆಸ್‌ನಿಂದ ಸ್ಪರ್ಧೆ ಸುಳ್ಳು; ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡೋಲ್ಲ: ಸೋಮಣ್ಣ ಸ್ಪಷ್ಟನೆ

ಆ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಒಟ್ಟಾಗಿ ಬುಧವಾರ ಸಂಜೆ 7.40ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹೈಕಮಾಂಡ್‌ ನಾಯಕರ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ಅಲ್ಲದೆ, ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 

'ಮೋದಿ ಗೆಲ್ಲಿಸಿ, ಭಾರತ ಉಳಿಸಿ' ಅಭಿಯಾನಕ್ಕೆ ಸಂಸದ ಜೊಲ್ಲೆ ಗೈರು; ಆಂದೋಲ ಶ್ರೀಗಳು ಕಿಡಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ