
ಬೆಂಗಳೂರು (ಫೆ.13) : ಬಿಜಿಎಸ್ ಸಮೂಹ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ। ಪ್ರಕಾಶನಾಥ ಸ್ವಾಮೀಜಿ ಅವರನ್ನು ಬಿಜೆಪಿ ಯುವ ಮುಖಂಡ ಡಾ। ನಿರಂತರ ಗಣೇಶ್ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಸ್ವಾಮೀಜಿ ಭೇಟಿ ಬಳಿಕ ಮಾತನಾಡಿದ ಅವರು, ಸ್ವಾಮೀಜಿಗಳ ಹುಟ್ಟುಹಬ್ಬದಂದು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ತಿಳಿಸಲಾಯಿತು ಎಂದರು.
ವೃತ್ತಿಯಲ್ಲಿ ವೈದ್ಯನಾಗಿದ್ದು, ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇನೆ. ಕೋವಿಡ್ ಸಮಯದಲ್ಲಿ ಉಚಿತವಾಗಿ ಮೆಡಿಕಲ್ ಕಿಟ್, ಫುಡ್ ಕಿಟ್ ವಿತರಣೆ ಮಾಡಿ ಜನರ ನೋವಿಗೆ ಸ್ಪಂದಿಸಿದ್ದೇನೆ. ಹಲವಾರು ವರ್ಷಗಳಿಂದ ಪಕ್ಷ, ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ ಎಂದು ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ಪ್ರಧಾನಿ ನರೇಂದ್ರ ಮೋದಿ ಆಡಳಿತದ ಕಡೆ ಒಲವು ತೋರಿದ್ದಾರೆ ಎಂದು ತಿಳಿಸಿದರು.
ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ 28 ಕ್ಷೇತ್ರಗಳ ಗೆಲುವಿನ ಗುರಿ ಹೊಂದಲಾಗಿದ್ದು, ಪಕ್ಷ ಸಂಘಟನೆಗೆ ನಾಯಕರು ಒತ್ತು ನೀಡುತ್ತಿದ್ದಾರೆ. ಮೋದಿ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತೆರಳಿ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಬಿಜೆಪಿ ಯುವ ಮುಖಂಡ ನಿರಂತರ ಗಣೇಶ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ