ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 224 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು ಮತ್ತು ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ನಾವು 136-140 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಲೋಕಸಭಾ ಚುನಾವಣೆ ಕೂಡ ಹೀಗೆ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ ತಿಳಿಸಿದರು.
ಬೆಂಗಳೂರು (ಜ.28): ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಕರ್ತರಿಗೆ ವಿವಿಧ ಮಂಡಳಿ ಮತ್ತು ನಿಗಮಗಳ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿಗಮ- ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ಎರಡು ವರ್ಷಕ್ಕೆ ಇಳಿಸಿದೆ.
ಈ ಮೂಲಕ ಹೆಚ್ಚು ಹೆಚ್ಚು ಪಕ್ಷದ ಕಾರ್ಯಕರ್ತರನ್ನು ಸೇರಿಸಿಕೊಂಡು ಅವರ ಕಾರ್ಯಕ್ಕೆ ತಕ್ಕ ಪ್ರತಿಫಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಪಕ್ಷಕ್ಕಾಗಿ ಹಲವು ವರ್ಷಗಳಿಂದ ಶ್ರಮಿಸಿದ ಎಲ್ಲ ಕಾರ್ಯಕರ್ತರನ್ನು ಗುರುತಿಸಿ ಪುರಸ್ಕರಿಸಬೇಕು ಎಂಬ ಉದ್ದೇಶದಿಂದ ಅಧಿಕಾರಾವಧಿಯನ್ನು ಎರಡು ವರ್ಷಕ್ಕೆ ಇಳಿಸಲಾಗಿದೆ.
ಮತ್ತೊಂದು ಸಂಕಷ್ಟದಲ್ಲಿ ಡ್ರೋನ್ ಪ್ರತಾಪ್; ಸುಳ್ಳು ಮಾಹಿತಿ ನೀಡಿ ರೈತರಿಗೆ ಲಕ್ಷಾಂತರ ವಂಚನೆ ದೂರು ದಾಖಲು!
ಇದು ಸಿದ್ದರಾಮಯ್ಯ ಅಥವಾ ಡಿ ಕೆ ಶಿವಕುಮಾರ್ ಅವರ ಸೂತ್ರವಲ್ಲ. ಹೈಕಮಾಂಡ್ ಸೂತ್ರವಾಗಿದೆ. ಪಕ್ಷದ ಅನೇಕ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದಾರೆ ಮತ್ತು ಅವರಿಗೆ ಪ್ರತಿಫಲ ನೀಡುವುದು ಪಕ್ಷದ ಜವಾಬ್ದಾರಿಯಾಗಿದೆ" ಎಂದು ಅವರು ಹೇಳಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸೀಟುಗಳನ್ನು ತಮ್ಮ ಪಕ್ಷ ಗೆಲ್ಲಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 224 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು ಮತ್ತು ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ನಾವು 136-140 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಮತ್ತು ಅದನ್ನು ಸಾಧಿಸಿ ತೋರಿದ್ದೇವೆ. ಅವರು ಏನು ಬೇಕಾದರೂ ಹೇಳಲಿ ಎಂದು ಅವರು ಹೇಳಿದರು.
ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್‌ಡಿಕೆ ಒತ್ತಾಯ