
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಎಚ್.ಎಂ.ರೇವಣ್ಣ ಅಲ್ಲ, ಯಾವ ಅಣ್ಣನನ್ನೇ ನಿಲ್ಲಿಸಿದರೂ ಗೆಲ್ಲಿಸುತ್ತೇವೆ. ಒಂದೊಮ್ಮೆ ನಾನೇ ದಾವಣಗೆರೆ ಅಭ್ಯರ್ಥಿಯಾಗಿ ನಿಂತರೂ ಅಚ್ಚರಿ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಹೊಸ ಸಂಚಲನವನ್ನುಂಟು ಮಾಡಿದ್ದಾರೆ.
ತಾಲೂಕಿನ ಬೆಳವನೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಅವರಿಗೆ ನಮ್ಮ ಬೆಂಬಲವಿದೆ. ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.
ಅಧಿಕಾರದಲ್ಲಿ ಯಾರಿರುತ್ತಾರೋ ಅವರೇ ಮುಖ್ಯಮಂತ್ರಿ. ನಮ್ಮ ಪಕ್ಷದವರಿಗೆ ಒಬ್ಬ ಮುಖ್ಯಮಂತ್ರಿ, ಮತ್ತೊಂದು ಪಕ್ಷಕ್ಕೆ ಇನ್ನೊಬ್ಬ ಮುಖ್ಯಮಂತ್ರಿ ಅಂತಾ ಇರುವುದಿಲ್ಲ ಎಂದಿರುವ ಅವರು ಈ ಮೂಲಕ ಸಿದ್ದರಾಮಯ್ಯ ಬೆಂಬಲಿಗರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಆಪರೇಷನ್ ಕಮಲ ಯಶಸ್ವಿಯಾಗಲ್ಲ: ಬಿಜೆಪಿಯವರ ಬಳಿ ಸಾಕಷ್ಟುದುಡ್ಡಿದೆ. ಇದೇ ಕಾರಣಕ್ಕೆ ಆಪರೇಷನ್ ಕಮಲಕ್ಕೆ ಮುಂದಾಗುತ್ತಿದ್ದಾರೆ. ಕಳೆದ 6 ತಿಂಗಳಿನಿಂದಲೂ ಬಿಜೆಪಿಯವರು ಆಪರೇಷನ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ