
ಬೆಂಗಳೂರು(ಮಾ.18): ಹಿಜಾಬ್(Hijab) ಅಥವಾ ಬೇರೆ ಯಾವುದೇ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ(Girls Education) ಬಹಳ ಮುಖ್ಯವಾಗಿದ್ದು, ಕೆಲ ವಿದ್ಯಾರ್ಥಿನಿಯರು ಶಾಲೆ ಹೋಗದಿರುವುದು ದೇಶಕ್ಕಾಗುತ್ತಿರುವ ನಷ್ಟ. ಎಲ್ಲಾ ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬಂದಿದ್ದು, ತೀರ್ಪು ಪಾಲನೆ ಎಲ್ಲರ ಕರ್ತವ್ಯ. ಇನ್ನಾದರೂ ಸರ್ಕಾರ ತಾಯಿ ಹೃದಯದಿಂದ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಉದಾತ್ತವಾಗಿ ಹೆಜ್ಜೆ ಇಡಬೇಕು. ಮಕ್ಕಳ ಹಾಲಿನಂತಹ ಮನಸ್ಸನ್ನು ಒಡೆಯಬಾರದು. ರಾಜಕೀಯ(Politics) ಉದ್ದೇಶದಿಂದ ಮುಂಚೂಣಿಗೆ ಬಂದ ಎಲ್ಲ ಅನಪೇಕ್ಷಿತ ವಿವಾದಗಳಿಂದ ಮಕ್ಕಳಿಗೆ ಅನ್ಯಾಯವಾಗಿದೆ. ಇದನ್ನು ಸರ್ಕಾರವಾಗಲಿ, ಮಕ್ಕಳು, ಪೋಷಕರು ಲಘುವಾಗಿ ಪರಿಗಣಿಸಬಾರದು ಎಂದರು.
Karnataka Hijab Verdict ಹಿಜಾಬ್ ತೀರ್ಪಿನ ಬಗ್ಗೆ ದೇವೇಗೌಡ, ಕುಮಾರಸ್ವಾಮಿ ಅಭಿಪ್ರಾಯ
ಹೈಕೋರ್ಟ್(High Court) ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಇದರಲ್ಲಿ ಎರಡು ಮಾತಿಲ್ಲ. ರಾಜಕೀಯದಲ್ಲಿ ಈ ವಿವಾದಗಳನ್ನು ಇನ್ನೂ ಜೀವಂತವಾಗಿಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್(Congress), ಜೆಡಿಎಸ್‌ಗೆ(JDS) ಹಿಜಾಬ್ ಭಯ ಎಂದು ಕೆಲವರು ಹೇಳುತ್ತಿದ್ದರೆ, ಬಿಜೆಪಿ(BJP), ಎಸ್‌ಡಿಪಿಐಗೆ ನೇರಾನೇರಾ ಸಮರ ಎಂದು ಹೇಳುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಲು ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೇನೆ. ಸದನದಲ್ಲಿ ಚರ್ಚೆಗೆ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಸದನದಲ್ಲಿ HDK ಹಿಜಾಬ್ ಪ್ರಸ್ತಾಪಕ್ಕೆ ಜಮೀರ್ ಗರಂ
ಬೆಂಗಳೂರು: ಹಿಜಾಬ್(Hijab) ವಿವಾದ ಸದನದಲ್ಲಿ ಮತ್ತೆ ಪ್ರತಿಧ್ವನಿಸಿದ್ದು, ಸಮವಸ್ತ್ರ ವಿವಾದದಿಂದ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟದ ಮೇಲಾಗಿರುವ ದುಷ್ಪರಿಣಾಮದ ಬಗ್ಗೆ ಚರ್ಚಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ(HD Kumaraswamy) ಅವರು ಮಾ.15 ರಂದು ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿತ್ತು.
ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಜಮೀರ್ ಅಹಮದ್ ಖಾನ್(Zameer Ahmed Khan), ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್(Congress) ಹಾಗೂ ಜೆಡಿಎಸ್(JDS) ನಡುವೆ ಕೆಲ ಕಾಲ ವಾದ-ಪ್ರತಿವಾದ ನಡೆದಿತ್ತು.
ನನ್ನದು ಕದ್ದುಮುಚ್ಚಿ ಯಾವ್ದೂ ಇಲ್ಲ. . ಈಗಲೂ ಅಲ್ಲಿಗೆ ಹೋಗ್ತೀನಿ : ಯೋಗೇಶ್ವರ್ಗೆ ಎಚ್ಡಿಕೆ ತಿರುಗೇಟು
ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ(Uniform) ವಿವಾದದಿಂದ ಸಮಸ್ಯೆ ಉಂಟಾಗಿದೆ. ಕೆಲವೆಡೆ ಅಹಿತಕರ ಘಟನೆಯೂ ನಡೆದು ಸಾಮರಸ್ಯಕ್ಕೆ ಭಂಗ ತಂದಿವೆ. ರಾಷ್ಟ್ರಕವಿ ಕುವೆಂಪು ಅವರು ನಮ್ಮ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದರು. ಆದರೆ ಅವರ ಜಿಲ್ಲೆಯಲ್ಲೇ ಹಿಂಸಾಚಾರ ನಡೆದಿದೆ. ಮಕ್ಕಳ ಮನಸ್ಸಿನ ಮೇಲೆ ಇದರಿಂದ ತೀವ್ರ ದುಷ್ಪರಿಣಾಮ ಬೀರಿದ್ದು, ಈ ಸೂಕ್ಷ್ಮ ವಿಚಾರ ಚರ್ಚೆಗೆ ಅವಕಾಶ ನೀಡಬೇಕು ಎಂದು ಕೋರಿದ್ದರು.
ಜೆಡಿಎಸ್-ಕಾಂಗ್ರೆಸ್ ವಾಗ್ವಾದ:
ಈ ವೇಳೆ ಮಧ್ಯಪ್ರವೇಶಿಸಿದ ಜಮೀರ್ ಅಹ್ಮದ್ ಖಾನ್, ‘ಕುಮಾರಸ್ವಾಮಿ ಅವರು ಹಿಜಾಬ್, ಗಿಜಾಬ್ ಏನೂ ಬೇಡ ಎನ್ನುತ್ತಿದ್ದರು. ಒಂದೂವರೆ ತಿಂಗಳ ನಂತರ ಈಗ ದಿಢೀರನೇ ಪ್ರಸ್ತಾಪ ಮಾಡುತ್ತಿದ್ದಾರೆ. ಇಷ್ಟುದಿನ ಸುಮ್ಮನಿದ್ದವರಿಗೆ ದಿಢೀರ್ ಪ್ರೀತಿ ಏಕೆ?’ ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪಿಸಿದ ಕೆಲ ಜೆಡಿಎಸ್ ಸದಸ್ಯರು, ‘ನಿಮಗೆ ಕಾಳಜಿ ಇದ್ದಿದ್ದರೆ ನೀವೂ ನಿಲುವಳಿ ಸೂಚನೆ ಮಂಡಿಸಬೇಕಿತ್ತು. ಈಗ ಕುಮಾರಸ್ವಾಮಿ ಅವರು ಮಂಡಿಸಿದರೆ ನಿಮಗೇನು?’ ಎಂದು ಕಿಡಿ ಕಾರಿದರು. ಇದರಿಂದ ಕೆಲ ಕಾಲ ವಾಗ್ವಾದ ನಡೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ