
ಬೆಂಗಳೂರು (ಸೆ.2): ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ತಿಳಿಸಿದ್ದಾರೆ.
ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡಿದ್ದಾರೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ತಮ್ಮ ವಹಿವಾಟು ತೀವ್ರ ಕುಸಿದಿದೆ ಎಂದು ಖಾಸಗಿ ಸಾರಿಗೆ ಸಂಸ್ಥೆಗಳ ಮಾಲೀಕರು ದೂರುತ್ತಿದ್ದಾರೆ. ಆಟೋ ರಿಕ್ಷಾ ಚಾಲಕರು, ಖಾಸಗಿ ಟ್ಯಾಕ್ಸಿ ಚಾಲಕರು, ಶಾಲಾ ಬಸ್ ಮತ್ತು ಕ್ಯಾಬ್ ಮಾಲೀಕರು ಸೇರಿದಂತೆ ಸುಮಾರು 32 ಸಂಸ್ಥೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.
ಆ.30ರ ಬಳಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಬಂದ್?: ಸಿಎಂ ಸಿದ್ದುಗೆ 3 ದಿನಗಳ ಗಡುವು
ಪ್ರತಿ ಚಾಲಕನಿಗೆ ರೂ 10,000 ಆರ್ಥಿಕ ನೆರವು ಮತ್ತು ಬೈಕ್ ಟ್ಯಾಕ್ಸಿ ನಿಷೇಧ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈ ಹಿಂದೆ ಒಕ್ಕೂಟ ಸರ್ಕಾರಕ್ಕೆ ಸಲ್ಲಿಸಿತ್ತು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್‌ಗಳಿಲ್ಲ, ಖಾಸಗಿ ಬಸ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಕೆಲವೆಡೆ ಜನರು ಖಾಸಗಿ ಸಾರಿಗೆ ಸೌಲಭ್ಯಗಳನ್ನು ಬಳಸುತ್ತಿಲ್ಲ ಎಂದು ನಮಗೆ ತಿಳಿದಿದೆ.ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗಾರೆಡ್ಡಿ ಜೊತೆಗೆ ಚರ್ಚಿಸುತ್ತೇನೆ ಎಂದರು.
ಸೆ.11ರಂದು ಬೆಂಗಳೂರು ಬಂದ್: ಖಾಸಗಿ ಬಸ್, ಆಟೋ, ಟ್ಯಾಕ್ಸಿಗಳ ಸೇವೆ ಸ್ಥಗಿತ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಮೊದಲ ಭರವಸೆ ಯೋಜನೆ ಶಕ್ತಿ ಯೋಜನೆ. ಈ ಯೋಜನೆಯು ರಾಜ್ಯಾದ್ಯಂತ ಐಷಾರಾಮಿ ವಾಹನಗಳನ್ನು ಹೊರತುಪಡಿಸಿ ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುತ್ತದೆ. ಶಕ್ತಿ ಯೋಜನೆಯಡಿ ಇದುವರೆಗೆ 48.5 ಕೋಟಿ ಮಹಿಳೆಯರು ಮುಕ್ತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ