
ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಾದ ಪೊಲೀಸ್ ಮಹಾನಿರ್ದೇಶಕ (DGP) ಹುದ್ದೆಗೆ ಎಂ. ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮಹತ್ತರ ಜವಾಬ್ದಾರಿ ಈಗಿನಿಂದ ಎಂ. ಎ. ಸಲೀಂ ಅವರ ಮೇಲಿದೆ. ರಾಜ್ಯ ಸರ್ಕಾರ ಶುಕ್ರವಾರ ಸಂಜೆ ಅಧಿಕೃತ ಪ್ರಕಟಣೆ ಹೊರಡಿಸಿ, ಎಂ. ಎ. ಸಲೀಂ ಅವರು ತಕ್ಷಣದಿಂದಲೇ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸುವಂತೆ ಸೂಚಿಸಿದೆ. ಹೀಗಾಗಿ, ಅವರು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.
1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಡಿಜಿಪಿ ಅಲೋಕ್ ಮೋಹನ್ ಅವರು ನಿವೃತ್ತರಾದ ನಂತರ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಕಳೆದ ಮೇ 21, 2025ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರು 2026ರ ಜೂನ್‌ನಲ್ಲಿ ನಿವೃತ್ತರಾಗಲಿದ್ದು, ಸುಮಾರು ಒಂದು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ. ಡಾ. ಎಂ.ಎ. ಸಲೀಂ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ. .ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಮತ್ತು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (CID) ನ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹೊಸ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಎಂ. ಎ. ಸಲೀಂ ಅವರಿಗೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ದೊಡ್ಡ ಸವಾಲಾಗಿದೆ. ವಿಶೇಷವಾಗಿ:
ಹೀಗೆ ಹಲವು ವಿಷಯಗಳಲ್ಲಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ