
ಬೆಂಗಳೂರು (ಆ.26): ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದ್ದು, ರಾಜ್ಯದಿಂದ ಮೈಸೂರು ಜಿಲ್ಲೆ ಹಿನಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂಧನ್ ಕೆ.ಎಸ್. ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಕರಾಗಿ ಅವರು ಸಲ್ಲಿಸಿದ ಸುದೀರ್ಘ ಸೇವೆ, ಕಾರ್ಯನಿರ್ವಹಿಸಿದ ಶಾಲೆಗಳಲ್ಲಿ ಅವರು ತಂದ ಸುಧಾರಣಾ ಕ್ರಮಗಳು, ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣೇತರ ಚಟುವಟಿಕೆಗಳ ಬೆಳವಣಿಗೆಗೆ ಅವರು ರೂಪಿಸಿದ ಕಾರ್ಯಕ್ರಮಗಳನ್ನು ಪರಿಗಣಿಸಿ ಪ್ರಶಸ್ತಿ ದೊರಕಿದೆ.
ಪ್ರಶಸ್ತಿಯು ಪ್ರಮಾಣ ಪತ್ರ, ಬೆಳ್ಳಿ ಪದಕ ಹಾಗೂ 50,000 ರುಪಾಯಿ ನಗದು ಒಳಗೊಂಡಿರುತ್ತದೆ. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ವಿವಿಧ ರಾಜ್ಯಗಳಿಂದ ಒಟ್ಟು 48 ಶಿಕ್ಷಕರು ಆಯ್ಕೆಯಾಗಿದ್ದು, ಅವರೆಲ್ಲರಿಗೂ ಸೆ. 5ರಂದು ದೆಹಲಿಯಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಯಿಂಟರ್ಸ್
- ಈ ವರ್ಷ ದೇಶಾದ್ಯಂತ 45 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ರಾಜ್ಯದಿಂದ ಒಬ್ಬರಷ್ಟೇ ಆಯ್ಕೆ
- ಪ್ರಶಸ್ತಿಯು ಪಮ್ರಾಣ ಪತ್ರ, 50000 ರು. ನಗದು, ಬೆಳ್ಳಿ ಪದಕವನ್ನು ಒಳಗೊಂಡಿರಲಿದೆ
- ಸೆ.5ರಂದು ದೆಹಲಿಯಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
- ಮೈಸೂರು ಜಿಲ್ಲೆ ಹಿನಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂದನ್
- ಸುದೀರ್ಘ ಸೇವೆ, ಕಾರ್ಯನಿರ್ವಹಿಸಿದ ಶಾಲೆಗಳಲ್ಲಿ ಅವರು ತಂದ ಸುಧಾರಣಾ ಕ್ರಮ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ