ಮಹದಾಯಿ ಸರ್ವಪಕ್ಷ ಸಭೆಯಲ್ಲಿ ಕೈಗೊಂಡ ಮಹತ್ವದ ತೀರ್ಮಾನಗಳು

Published : Jan 05, 2020, 09:27 PM ISTUpdated : Jan 05, 2020, 09:40 PM IST
ಮಹದಾಯಿ ಸರ್ವಪಕ್ಷ ಸಭೆಯಲ್ಲಿ ಕೈಗೊಂಡ ಮಹತ್ವದ ತೀರ್ಮಾನಗಳು

ಸಾರಾಂಶ

ಕಗ್ಗಂಟಾಗಿರುವ ಸಮಸ್ಯೆ ಬಗೆಹರಿಸಲು ಸರ್ವಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಸಭೆ ನಡೆಸಿದ್ರು. ಹುಬ್ಬಳ್ಳಿಯಲ್ಲಿ ನಡೆದ ಇಂದಿನ ಸಭೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು,ಇನ್ನೂ ಮಹದಾಯಿ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಈ ಕೆಳಗಿನಂತಿವೆ ನೋಡಿ.

ಹುಬ್ಬಳ್ಳಿ, [ಜ.05]: ದಶಕಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ಮಹದಾಯಿ ಮತ್ತು ಕಳಸಾ- ಬಂಡೂರಿ ವಿವಾದ ಬಗೆಹರಿಯುತ್ತಿಲ್ಲ. ಮತ್ತೊಂದೆಡೆ  ರೈತರ ಹೋರಾಟ ಮುಂದುವರಿದಿದೆ.

ಈ ಹಿನ್ನೆಲೆಯಲ್ಲಿ ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ರಾಜ್ಯದ ರಾಜಕಾರಣಿಗಳು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಇದಕ್ಕೊಂದು ತಾರ್ಕಿಕ ಅಂತ್ಯ ಹಾಡಲು ಇಂದು [ಭಾನುವಾರ] ಹುಬ್ಬಳ್ಳಿಯ ಸರ್ಕೀಟ್ ಹೌಸ್‌ನಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.  

ನರಗುಂದ: ಮಹದಾಯಿ ಕುರಿತು ಕೇಂದ್ರದ ನಿರ್ಧಾರಕ್ಕೆ ಸ್ವಾಗತ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಈ ಸಭೆಯಲ್ಲಿ ಕಳಸಾ-ಬಂಡೂರಿ ಯೋಜನೆ ಜಾರಿ ಸಂಬಂಧ, ಮಹದಾಯಿ ನ್ಯಾಯಾಧಿಕರಣ ನೀಡಿರುವ ಆದೇಶದ ಅನುಷ್ಠಾನ, ಕುಡಿಯುವ ನೀರಿನ ಯೋಜನೆ ಜಾರಿಗೆ ಅಧಿಸೂಚನೆ ಹೊರಡಿಸುವ ಕುರಿತು ಚರ್ಚೆ ನಡೆಸಲಾಯಿತು.

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಎಸ್.ಆರ್. ಪಾಟೀಲ್, ಸೇರಿದಂತೆ ಮೂರು ಪಕ್ಷಗಳ‌ ಜನಪ್ರತಿನಿಧಿಗಳು ಭಾಗವಹಿಸಿದ್ರು.

ಪ್ರಧಾನಿ ಮೋದಿಯಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಬೃಹತ್ ಪ್ರತಿಭಟನೆ

ಈ ವೇಳೆ ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಬಗ್ಗೆ ಒಗ್ಗಟ್ಟಿನ ಮಂತ್ರ ಪಠಿಸಿದರು. ಇನ್ನೂ ಮಹದಾಯಿ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಈ ಕೆಳಗಿನಂತಿವೆ ನೋಡಿ. 

ಸಭೆಯ ತೀರ್ಮಾನಗಳು
1. ಮಹದಾಯಿ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಅನುಷ್ಠಾನ.
2. ಕುಡಿಯುವ ನೀರಿನ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಮಾಡುವುದು.
4.  ಗೋವಾ ಸರ್ಕಾರದ ಕ್ಯಾತೆಗಳಿಗೆ ದಾಖಲೆ ಸಹಿತ ಸಭೆಯಲ್ಲಿ ವಿಮರ್ಶೆ.
5. ಕಾನೂನು ಪಂಡಿತರ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳುವುದು.
6. ಮುಂದಿನ ಸಭೆಯಲ್ಲಿ ಎಲ್ಲಾ ಉತ್ತರ ಕರ್ನಾಟಕ ಶಾಸಕರನ್ನ ಸೇರಿಸಿ ಸಭೆ ನಡೆಸುವುದು
7. ಶಾಂತಿಯುತವಾಗಿ ಮಹದಾಯಿ ವಿವಾದವನ್ನ ಬಗೆಹರಿಸಲು ಚರ್ಚೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!