
ಬೆಂಗಳೂರು (ಫೆ.10): ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾರೊಂದಿಗೆ ತೆರಳಿ ಪುಣ್ಯಸ್ನಾನ ಮಾಡಿದರು. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ತೆರಳಿದ ಡಿ.ಕೆ.ಶಿವಕುಮಾರ್ ಅವರನ್ನು ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದ ಗೋಪಾಲ ಗುಪ್ತಾ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಬಳಿಕ ಶಿವಕುಮಾರ್ ಹಾಗೂ ಪತ್ನಿ ಉಷಾ ಅವರು ತ್ರಿವೇಣಿ ಸಂಗಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.
ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, 'ಹರ ಹರ ಮಹಾದೇವ. ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ' ಎಂದು ಬರೆದು ಕೊಂಡಿದ್ದಾರೆ. ಐತಿಹಾಸಿಕ ಕ್ಷಣ: ಪವಿತ್ರ ಸ್ನಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಕುಂಭಮೇಳವನ್ನು ಇಷ್ಟೊಂದು ಪವಿತ್ರ ರೀತಿಯಲ್ಲಿ ನಡೆಸಿದ್ದಕ್ಕಾಗಿ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ.
ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ ಎಂದು ಹೇಳಿದರು. ಇದಕ್ಕೂ ಮೊದಲು ಬೆಂಗಳೂರಲ್ಲಿ ಮಾತ ನಾಡಿದ ಅವರು, ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ತೆರಳುತ್ತಿ ದ್ದೇನೆ. ನಮ್ಮ ರಾಜ್ಯದಲ್ಲಿ ನಡೆಯುವ ಕುಂಭ ಮೇಳಕ್ಕೆ ಈಗಾಗಲೇ ಕೆಲ ಸ್ವಾಮೀಜಿಗಳು ಮಾತುಕತೆ ನಡೆಸಿದ್ದಾರೆ. ನಮ್ಮ ರಾಜ್ಯದಲ್ಲಿ ನಡೆಯುವ ಕುಂಭಮೇಳದಲ್ಲೂ ಭಾಗವಹಿಸು ತ್ತೇನೆ. ಏರೋ ಇಂಡಿಯಾ, ಇನ್ವೆಸ್ಟ್ ಕರ್ನಾಟಕ ಕಾಠ್ಯಕ್ರಮದಲ್ಲೂ ಭಾಗವಹಿಸುವೆ ಎಂದರು.
ದಕ್ಷಿಣಕಾಶಿ ಟಿ.ನರಸೀಪುರದಲ್ಲಿ ಕುಂಭಮೇಳ: ಏನಿದರ ಇತಿಹಾಸ, ಮಹತ್ವ.. ಇಲ್ಲಿದೆ ಮಾಹಿತಿ!
ಡಿಕೆಶಿ ಪುತ್ರಿ ಐಶ್ವರ್ಯಾ ಸ್ನಾನ: ಇಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್‌ರ ಪುತ್ರಿ ಐಶ್ವರ್ಯಾ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಇದು ಪದಗಳಿಗೆ ಮೀರಿದ ಅನುಭವ. ಜಗತ್ತಿನ ಅತಿ ದೊಡ್ಡ ಸಮಾರಂಭದ ಶಕ್ತಿ, ಏಕತೆ, ಆಧ್ಯಾತ್ಮಿಕ ಆಳ ನನ್ನನ್ನು ಮಂತ್ರಮುಗ್ಧವಾಗಿಸಿದೆ. ಭಕ್ತಿ, ಆಚರಣೆ ಮತ್ತು ಸಾಮೂಹಿಕ ಪ್ರಜ್ಞೆಯು ನಿಜವಾದ ದೈವಿಕತೆಯ ವಾತಾವರಣವನ್ನು ಸೃಷ್ಟಿಸಿತು’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ