ಬೆಳಗಾವಿ ಗಡಿ ಭಾಗಕ್ಕೆ ಮಹಾರಾಷ್ಟ್ರ ಹಣ ಬಿಡುಗಡೆ ವಿಚಾರ: ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌ 

Published : Mar 15, 2023, 04:54 PM ISTUpdated : Mar 15, 2023, 05:00 PM IST
ಬೆಳಗಾವಿ ಗಡಿ ಭಾಗಕ್ಕೆ ಮಹಾರಾಷ್ಟ್ರ ಹಣ ಬಿಡುಗಡೆ ವಿಚಾರ: ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌ 

ಸಾರಾಂಶ

ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರವನ್ನು ಕೇಂದ್ರ ಬಿಜೆಪಿ ಸರ್ಕಾರ ಕೂಡಲೇ ವಜಾಗೊಳಿಸಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಇಫಲವಾಗಿರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು (ಮಾ.15) :ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರವನ್ನು ಕೇಂದ್ರ ಬಿಜೆಪಿ ಸರ್ಕಾರ ಕೂಡಲೇ ವಜಾಗೊಳಿಸಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯದ ಗಡಿ ಜಿಲ್ಲೆಯ 865 ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ(Maharashtra government) ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ(Mahatma Jyotiba Phule Jana Arogya Yojana) ಹೆಸರಲ್ಲಿ ಹಣ ಬಿಡುಗಡೆ ಮಾಡಿರುವುದನ್ನು ಖಂಡಿಸಿ #ಕನ್ನಡನೆಲ ಹ್ಯಾಷ್‌ಟ್ಯಾಕ್ ಬಳಸಿ ಸರಣಿ ಟ್ವೀಟ್(Tweet) ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಿದ್ದು ತಮ್ಮ ಆಡಳಿತದಲ್ಲಿ ಬೆಳಗಾವಿ ಸಮಸ್ಯೆಯನ್ನು ಏಕೆ ಬಗೆಹರಿಸಲಿಲ್ಲ?: ಸಚಿವ ಕಾರಜೋಳ

ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಗಡಿಗ್ರಾಮಗಳಿಗೆ ಅನುದಾನ ನೀಡುತ್ತಿರುವುದು ಸಾರ್ವಭೌಮತೆ ಮತ್ತು ಒಕ್ಕೂಟ ವ್ಯವಸ್ಥೆಗೆ ಸವಾಲು ಹಾಕಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆ(Karnataka-maharashtra border)ಗೆ ಸಂಬಂಧಿಸಿದಂತೆ ಮಹಾಜನ್‌ ವರದಿ(Mahajan report)ಯೇ ಅಂತಿಮ. ಮಹಾರಾಷ್ಟ್ರ ಸರ್ಕಾರ ಕಟ್ಟುಪಾಡು ಮೀರಿ ಕರ್ನಾಟಕದ ಜನರಿಗೆ ಯೋಜನೆ ಘೋಷಿಸಿದರೂ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ(Karnataka BJP government) ಸುಮ್ಮನಿರುವುದು ನೋಡಿದರೆ ಸರ್ಕಾರಗಳು ಸತ್ತಿವೆಯಾ? ಎಂಬ ಅನುಮಾನ ಬರುತ್ತಿದೆ ಎಂದು ಹರಿಹಾಯ್ದಿದ್ದಾರೆ.

ನಮ್ಮ ರಾಜ್ಯದ ಒಂದಿಂಚು ಭೂಮಿಯನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಭಾಷೆ, ಸಂಸ್ಕೃತಿ, ನೆಲ, ಜಲ ಇವು ಆರೂವರೆ ಕೋಟಿ ಕನ್ನಡಿಗರ ಹಕ್ಕು ಮತ್ತು ಸಾರ್ವಭೌಮತೆಯ ಸಂಕೇತ. ಇದಕ್ಕೆ ಚ್ಯುತಿಯಾದರೆ ನಾವು ಸುಮ್ಮನಿರುವುದಿಲ್ಲ. ಪದೇ ಪದೇ ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

 

Karnataka Assembly Election 2023: ಬೆಳಗಾವಿ ಗಡಿಭಾಗದಲ್ಲಿ ಗಿಫ್ಟ್‌ ರಾಜಕೀಯ ಜೋರು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ