
ಉಡುಪಿ (ಆ.21): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನ ವೇಳೆ ಆರೋಪಿಯ ಸಹಚರರಾದ ಸೃಜನ್, ಹಿತೇಶ್, ಮತ್ತು ಸಹನ್ ಎಂಬ ಮೂವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಈ ಹಿನ್ನೆಲೆ ಈ ಮೂವರನ್ನು ಕಾರ್ಕಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ, ಮಹೇಶ್ ಶೆಟ್ಟಿ ತಿಮರೋಡಿಯನ್ನ ಬಂಧಿಸಿ ಕರೆದುಕೊಂಡು ಹೋಗುತ್ತಿದ್ದ ಪೊಲೀಸರು. ಈ ವೇಳೆ ಪೊಲೀಸರೊಂದಿಗೆ ಹೋಗುತ್ತಿದ್ದ ಅಡಿಷನಲ್ ಎಸ್ಪಿ ಕಾರು. ಆದರೆ ಹಿಂಬದಿ ಬರುತ್ತಿದ್ದ ತಿಮರೋಡಿ ಸಹಚರರ ಕಾರು ಅಡಿಷನಲ್ ಎಸ್‌ಪಿ ಕಾರಿಗೆ ಹಿಂಬಂದಿಯಿಂದ ಗುದ್ದಿದೆ ಈ ಹಿನ್ನೆಲೆ ಈ ಕೃತ್ಯವು ಪೊಲೀಸರ ಕರ್ತವ್ಯಕ್ಕೆ ಉದ್ದೇಶಪೂರ್ವಕ ಅಡ್ಡಿಯನ್ನುಂಟುಮಾಡಿದೆ. ಈ ಸಂಬಂಧ ಕಾರ್ಕಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಮತ್ತೊಂದು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಬಳಿಕ ಬ್ರಹ್ಮಾವರ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ.ಈ ಘಟನೆಯ ಹಿನ್ನೆಲೆಯಲ್ಲಿ, ಬಿಜೆಪಿ ಹಿರಿಯ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾರ್ಕಾಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಮಹೇಶ ಶೆಟ್ಟಿ ತಿಮರೋಡಿ ವಿಚಾರಣೆ ಮುಗಿದಿದ್ದು, ಜಾಮೀನು ಅರ್ಜಿ ತಿರಸ್ಕರಿಸಿ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ಆದೇಶಿಸಿದ ನ್ಯಾಯಾಲಯ. ಬಿಎಲ್ ಸಂತೋಷ್ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಉಡುಪಿ ಬಂಧಿಸಲಾಗಿತ್ತು. ಪೊಲೀಸರು ಬಂಧಿಸುತ್ತಿದ್ದಂತೆ ಜಾಮೀನು ಅರ್ಜಿ ಸಲ್ಲಿಸಿದ್ದ ತಿಮರೋಡಿ. ಇಂದು ಜಾಮೀನು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿದೆ. ಆಗಸ್ಟ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ