ಮಹಿಷಾ ದಸರಾಗೆ ಸರ್ಕಾರ ಅನುಮತಿ: ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಏನು ಹೇಳಿದ್ರು?

By Ravi Janekal  |  First Published Oct 12, 2023, 4:41 PM IST

ಮೈಸೂರು ದಸರಾ ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಈ ಬಾರಿ ಸಿಎಂ‌ ಹಾಗೂ ನಾದಬ್ರಹ್ಮ ಹಂಸಲೇಖ ದಸರಾ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.


ಮೈಸೂರು (ಅ.12): :ಮೈಸೂರು ದಸರಾ ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಈ ಬಾರಿ ಸಿಎಂ‌ ಹಾಗೂ ನಾದಬ್ರಹ್ಮ ಹಂಸಲೇಖ ದಸರಾ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರು ದಸರಾ ವೇಳೆ ಮಹಿಷಾ ದಸರಾ ಮಾಡುತ್ತೇವೆಂದು ಅನುಮತಿ ನೀಡುವಂತೆ ಪತ್ರ ಕೊಟ್ಟಿದ್ದಾರೆ. ಮಹಿಷಾ ದಸರಾ 2016ರಿಂದ ಆಚರಣೆ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿಯೂ ಮಹಿಷಾನ ಮೂರ್ತಿಗೆ ಪುಷ್ಪಾರ್ಚನೆ ಮಾಡುಲು ಅನುಮತಿ ಕೇಳಿದ್ದಾರೆ. ಆದರೆ ಈ‌‌ ವಿಚಾರವಾಗಿ ಪರ ವಿರೋಧ ಚರ್ಚೆಯಾಗುತ್ತಿದೆ. ಮಹಿಷಾ ದಸರಾ ವಿರುದ್ಧವಾಗಿ ಬಿಜೆಪಿ ಚಾಮುಂಡಿ ಬೆಟ್ಟ ಚಲೋ ಹಮ್ಮಿ ಕೊಂಡಿದೆ. ಪುರ ಭವನದಲ್ಲಿ ಕಾರ್ಯಕ್ರಮ ನಡೆಸಲು ಷರತ್ತು ಬದ್ಧ ಅನುಮತಿ ಕೊಟ್ಟಿದ್ದೇವೆ ಎಂದರು.

Tap to resize

Latest Videos

ಮಹಿಷಾ ಕಾರ್ಯಕ್ರಮಕ್ಕೆ ಸುತ್ತಮುತ್ತ ಜಿಲ್ಲೆಗಳಿಂದ ಜನರು ಬರುತಿದ್ದಾರೆ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರದಲ್ಲಿ 144 ಸೆಕ್ಷನ್ ಜಾರಿ. ಇಂದು ಮಧ್ಯ ರಾತ್ರಿಯಿಂದ 144 ಜಾರಿಯಾಗಲಿದೆ.  ಪ್ರತಿಭಟನೆ, ರ್ಯಾಲಿ, ಫ್ಲೆಕ್ಸ್, ಬ್ಯಾನರ್ ಹಾಗೂ ಮೂರ್ತಿ ಮೆರವಣಿಗೆಗೆ ಅವಕಾಶ ಇಲ್ಲ. ಹಾಗೇನಾದರೂ ಕಾನೂನು ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಮಹಿಷಾ ದಸರಾಕ್ಕೆ ರಾಜ್ಯ ಸರ್ಕಾರ ಅನುಮತಿ; ಚಿಂತಕ ಚಕ್ರವರ್ತಿ ಸೂಲಿಬೆಲೆ ಕೆಂಡಾಮಂಡಲ!

1) ಯಾವುದೇ ಮೆರವಣಿಗೆ, ಪ್ರತಿಭಟನೆ, ರಾಲಿ, ಬೈಕ್ ರಾಲಿ, ನಡೆಸುವುದು.
2) ಪರ ವಿರೋಧ ಘೋಷಣೆ ಕೂಗುವುದು
3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು
4) 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು.
5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು.
6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪುಚಾರ, ಧ್ವನಿವರ್ಧಕ ಬಳಸುವುದು, ಫೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು.
ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ.

click me!