ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ: ಬ್ಯಾಟರಿ ಗೋದಾಮಿಗೆ ಬೆಂಕಿ: ಆಕಾಶದೆತ್ತರಕ್ಕೆ ದಟ್ಟ ಹೊಗೆ

Published : Apr 09, 2026, 12:07 PM IST
fire incident in Ramnagar

ಸಾರಾಂಶ

Ramanagara battery warehouse fire:  ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಎನ್‌ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬ್ಯಾಟರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ

ರಾಮನಗರ: ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಇಲ್ಲಿನ ಬ್ಯಾಟರಿ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಧಗಧಗನೇ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ. ಬ್ಯಾಟರಿ, ಲೈಟರ್ , ಎಲೆಕ್ಟ್ರಾನಿಕ್ ಐಟಮ್ ಶೇಖರಿಸಿದ್ದ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಎಲೆಕ್ಟ್ರಾನಿಕ್ ಐಟಮ್ ಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನೆ ನಡೆದು 1 ಗಂಟೆ ಕಳೆದರೂ ಯಾವುದೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿಲ್ಲ ಎಂದು ವರದಿಯಾಗಿದೆ.

ಈ ಬೆಂಕಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ವಸ್ತುಗಳು ನಾಶವಾಗಿವೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಜಿಎನ್‌ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬ್ಯಾಟರಿ ಗೋದಾಮು ಇದಾಗಿದೆ.

ಇದನ್ನೂ ಓದಿ: ಮದುವೆ ಪತ್ರಿಕೆ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ವರ ಸಾವು: ಮದುವೆ ನಡೆಯಬೇಕಾದ ಮನೆಯಲ್ಲಿ ಸೂತಕದ ಛಾಯೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಗಳಲ್ಲಿ 'ವಂದೇ ಮಾತರಂ' ಕಡ್ಡಾಯ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಿರಾಕರಿಸಿದ ಹೈಕೋರ್ಟ್
ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿ: ಹಸೆಮಣೆ ಏರಬೇಕಾದ ಯುವಕ ಮಸಣಕ್ಕೆ