
ಮಂಗಳೂರು (ಅ.12): ಟ್ಯಾಕ್ಸಿ ಚಾಲಕನಿಗೆ ಮೊಬೈಲ್‌ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವ ಪೊಲೀಸರು ಶನಿವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂ ಕೂಡ ಪೊಲೀಸರ ವಶದಲ್ಲಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ.
ಶುಕ್ರವಾರ ರಾತ್ರಿ ಮಂಗಳೂರಿಗೆ ಬಂದಿದ್ದ ನಟ ಜಯಕೃಷ್ಣನ್ ಸೇರಿದಂತೆ ಮೂವರು ಉಬರ್ ಮತ್ತು ರ‍್ಯಾಪಿಡೊ ಕ್ಯಾಪ್ಟನ್ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು. ವಾಹನ ಹತ್ತುವ ಸ್ಥಳವನ್ನು ಬಿಜೈ ನ್ಯೂ ರೋಡ್ ಎಂದು ನಮೂದಿಸಿದ್ದರು. ನಾನು ಆ್ಯಪ್ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದ್ದೆ. ಆಗ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯು ನನಗೆ ‘ಮುಸ್ಲಿಂ ಉಗ್ರವಾದಿ, ಟೆರರಿಸ್ಟ್’ ಎಂದು ಅಪಹಾಸ್ಯವಾಗಿ ಮಾತನಾಡಿದ್ದ. ಅಲ್ಲದೆ ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ನನ್ನ ತಾಯಿಗೆ ಅವಾಚ್ಯವಾಗಿ ಬೈದಿದ್ದಾನೆ ಎಂದು ಆರೋಪಿಸಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ಉರ್ವ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ: ಮಂಗಳೂರಿನ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಸೂಪರ್‌ಸ್ಟಾರ್, ಎಫ್‌ಐಆರ್ ದಾಖಲು!
ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ನಾನಲ್ಲ, ವಿಮಲ್ ಬೈದಿರುವುದಾಗಿ ಹೇಳಿರುವುದರಿಂದ ನಟನ ವಾಯ್ಸ್ ಸ್ಯಾಂಪಲ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ