ಭಕ್ತರ ಸೌಲಭ್ಯಕ್ಕಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ತಿರುಪತಿ ಮಾಡೆಲ್ ಕ್ಯೂ ಕಾಂಪ್ಲೆಕ್ಸ್!

Published : Sep 13, 2025, 06:10 PM IST
male mahadeshwara

ಸಾರಾಂಶ

ಮಹದೇಶ್ವರನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ ಭಕ್ತರು ಸುಗಮವಾಗಿ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ.

ವರದಿ: ಪುಟ್ಟರಾಜು.ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್

ಚಾಮರಾಜನಗರ (ಸೆ.13): ಮಲೆ ಮಹದೇಶ್ವರ ಬೆಟ್ಟಕ್ಕೆ ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮಹದೇಶ್ವರನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ ಭಕ್ತರು ಸುಗಮವಾಗಿ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ.

ಮಲೆಮಹದೇಶ್ವರ ಬೆಟ್ಟ ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ. ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ, ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ. ಶಕ್ತಿ ಯೋಜನೆ ಜಾರಿಯಾದ ನಂತರ ಭಕ್ತರು ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು ಮಹದೇಶ್ವರನ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ.

ಹಾಗಾಗಿ ಭಕ್ತರು ಸುಗಮ ಹಾಗು ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. ಈ ಕಾಂಪ್ಲೆಕ್ಸ್ ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಯ, ಕುಡಿಯುವ ನೀರಿನ ಸೌಲಭ್ಯ, ಉಪಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ. ಬೆಟ್ಟಕ್ಕೆ ಬರುವ ಭಕ್ಯರು ಮಹದೇಶ್ವರನ ದರ್ಶನ ಪಡೆಯಲು ಮೊದಲೇ ಸಮಯ ನಿಗಧಿ ಮಾಡಲು ಸಹ ನಿರ್ಧರಿಸಲಾಗಿದೆ. ಇದರಿಂದ ಭಕ್ತರು ದೇವಸ್ಥಾನ ಆವರಣದಲ್ಲಿ ಅನಾವಶ್ಯಕವಾಗಿ ಕಾಯುವುದು ತಪ್ಪಲಿದೆ.

ಕ್ಯೂ ಕಾಂಪ್ಲೆಕ್ಸ್ ಅಲ್ಲದೆ ಒಂದೇ ಬಾರಿಗೆ 4 ಸಾವಿರ ಮಂದಿ ಕುಳಿತು ಭೋಜನ ಮಾಡುವ ಸುಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲಾಗುತ್ತಿದೆ. ಎಲ್ಲವು ಅಂದುಕೊಂಡರೆ ಆದರೆ ಮೂರು ತಿಂಗಳ ಒಳಗೆ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್ ಹಾಗು ಸುಸಜ್ಜಿತ ದಾಸೋಹ ಭವನ ನಿರ್ಮಾಣ ಕಾಮಗಾರಿ ಮುಗಿಯಲಿದೆ. ಇದೇ ವೇಳೆ ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಬೆಟ್ಟದಿಂದ ಮಹದೇಶ್ವರ ಬೆಟ್ಟದವರಗೆ ತಿರುಪತಿ ಮಾದರಿ ಮೆಟ್ಟಿಲು ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವ ನಿರೀಕ್ಷೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌