ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ 10 ರಿಂದ 14ರ ವರೆಗೆ ಅದ್ಧೂರಿಯಾಗಿ ದೀಪಾವಳಿ ಜಾತ್ರೆ ನಡೆದಿದ್ದು, ಕೇವಲ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2.8 ಕೋಟಿ ರೂ. ಆದಾಯ ಹರಿದು ಬಂದಿದೆ.
ಚಾಮರಾಜನಗರ (ನ.17): ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ 10 ರಿಂದ 14ರ ವರೆಗೆ ಅದ್ಧೂರಿಯಾಗಿ ದೀಪಾವಳಿ ಜಾತ್ರೆ ನಡೆದಿದ್ದು, ಕೇವಲ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2.8 ಕೋಟಿ ರೂ. ಆದಾಯ ಹರಿದು ಬಂದಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಈ ಬಗ್ಗೆ ಮಾಹಿತಿ ನೀಡಿದ್ದು, ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತರಿಂದ ಐದು ದಿನಗಳ ಅವಧಿಯಲ್ಲಿ ದೇವಸ್ಥಾನಕ್ಕೆ 2.8 ಕೋಟಿ ಆದಾಯ ಹರಿದು ಬಂದಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿನ್ನದ ರಥ ಸೇವೆ, ರುದ್ರಾಕ್ಷಿ ವಾಹನ, ಬೆಳ್ಳಿ ರಥ, ಲಾಡು ಮಾರಾಟ, ಮಿಶ್ರ ಪ್ರಸಾದ ಮಾರಾಟ, ಪಾರ್ಕಿಂಗ್, ವಿಶೇಷ ದರ್ಶನದ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳಿಂದ 2,08,82,110 ರೂ. ಆದಾಯ ಬಂದಿದೆ ಐದು ದಿನಗಳ ಅವಧಿಯಲ್ಲಿ ಭಕ್ತರು 1,786 ಚಿನ್ನದ ರಥೋತ್ಸವ, 50 ಬೆಳ್ಳಿ ರಥೋತ್ಸವ, 1,114 ಬಸವ ವಾಹನ, 9,135 ಹುಲಿ ವಾಹನ, 410 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಸಿದ್ದಾರೆ. ಇನ್ನು ಮಲೆ ಮಹದೇಶ್ವರ ಹುಲಿ ವಾಹನ ಉತ್ಸವದಲ್ಲಿ ಅತಿ ಹೆಚ್ಚು ಭಕ್ತರು ವಾಹನ ಎಳೆದಿದ್ದಾರೆ. ಈ ಉತ್ಸವಗಳಿಂದಲೇ 86 ಲಕ್ಷ ರೂ. ಹಣ ಪ್ರಾಧಿಕಾರಕ್ಕೆ ಸಂದಾಯವಾಗಿದೆ.
undefined
5 ವರ್ಷದಲ್ಲಿ 3000 ಕರ್ನಾಟಕ ಪಬ್ಲಿಕ್ ಶಾಲೆ ಶುರು: ಸಚಿವ ಮಧು ಬಂಗಾರಪ್ಪ
ಇನ್ನು, ಲಾಡು ಮಾರಾಟದಿಂದ 54 ಲಕ್ಷ, ಮಿಶ್ರ ಪ್ರಸಾದದಿಂದ 8 ಲಕ್ಷ, ಪುದುವಟ್ಟು ಸೇವೆಯಿಂದ 2 ಲಕ್ಷ, ಇತರ ಸೇವೆಗಳಿಂದ 5 ಲಕ್ಷ, ಪ್ರಸಾದದ ಕ್ಯಾರಿ ಬ್ಯಾಗ್ನಿಂದಲೇ 72 ಸಾವಿರ ಹಣ ಬಂದಿದೆ. ಒಟ್ಟಾರೆ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2,08,82,110 ರೂ. ಆದಾಯ ಸಂಗ್ರಹವಾಗಿದೆ. ತಿರುಪತಿ ಮಾದರಿಯಲ್ಲಿ ಕಾಲ್ನಡಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ದರ್ಶನ, ವಸತಿ ಹಾಗೂ ದಾಸೋಹದ ಪಾಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 10,600ಕ್ಕೂ ಹೆಚ್ಚು ಕಾಲ್ನಡಿಗೆ ಭಕ್ತರು ಈ ಪಾಸ್ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ.