BBMP: ಪ್ರತಿಮೆ ಸ್ಥಾಪನೆಯಿಂದ ಮಲ್ಲತ್ತಹಳ್ಳಿ ಕೆರೆಗೆ ಹಾನಿ ಆಗಲ್ಲ: ಪಾಲಿಕೆ

Published : Mar 07, 2023, 10:27 AM IST
BBMP: ಪ್ರತಿಮೆ ಸ್ಥಾಪನೆಯಿಂದ ಮಲ್ಲತ್ತಹಳ್ಳಿ ಕೆರೆಗೆ ಹಾನಿ ಆಗಲ್ಲ: ಪಾಲಿಕೆ

ಸಾರಾಂಶ

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲತ್ತಳ್ಳಿಯ ಕೆರೆ ಪ್ರದೇಶದಲ್ಲಿ ಬಯಲು ರಂಗಮಂದಿರ ಹಾಗೂ ಶಿವನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದು ಬಿಬಿಎಂಪಿ ಹೈಕೋರ್ಚ್‌ಗೆ ಸ್ಪಷ್ಟಪಡಿಸಿದೆ.

ಬೆಂಗಳೂರು (ಮಾ.7) : ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲತ್ತಳ್ಳಿಯ ಕೆರೆ ಪ್ರದೇಶದಲ್ಲಿ ಬಯಲು ರಂಗಮಂದಿರ ಹಾಗೂ ಶಿವನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದು ಬಿಬಿಎಂಪಿ ಹೈಕೋರ್ಟ್(Karnataka Highcourt) ಸ್ಪಷ್ಟಪಡಿಸಿದೆ.

ಈ ಕುರಿತು ವಕೀಲೆ ಗೀತಾ ಮಿಶ್ರಾ(Geeta Mishraa)ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಬಿಬಿಎಂಪಿ(BBMP) ಮುಖ್ಯ ಎಂಜಿನಿಯರ್‌ (ಕೆರೆ) ವಿಜಯಕುಮಾರ್‌ ಹರಿದಾಸ್‌(Vijayakumar haridas) ಅವರು ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಶಿವನಮೂರ್ತಿ ಕೆರೆ(Shivanamurthy kere) ಏರಿ ಪ್ರದೇಶದಿಂದ 52 ಮೀಟರ್‌ ದೂರದಲ್ಲಿದೆ. ಮೂರ್ತಿ ಸ್ಥಾಪನೆಯಿಂದ ಕೆರೆಗೆ ಯಾವುದೇ ಹಾನಿ ಆಗಲ್ಲ. ಮುಖ್ಯವಾಗಿ ಈ ಕಾಮಗಾರಿ ಅನಧಿಕೃತವಾಗಿಲ್ಲ ಮತ್ತು ಯಾವ ನಿಯಮದ ಉಲ್ಲಂಘನೆಯೂ ನಡೆದಿಲ್ಲ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

Bengaluru: ಅವೆನ್ಯೂ ರಸ್ತೆಯಲ್ಲಿ ದರ್ಗಾ ಕುಸಿತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಅದನ್ನು ಪರಿಗಣಿಸಿದ ನ್ಯಾಯಪೀಠ, ಬಿಬಿಎಂಪಿ ಪ್ರಮಾಣ ಪತ್ರಕ್ಕೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲ ಜಿ.ಆರ್‌. ಮೋಹನ್‌ ಅವರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಕೆರೆ ಪ್ರದೇಶದಲ್ಲಿ ವೃತ್ತಾಕಾರದ ಕಾಂಕ್ರಿಟ್‌ನ ಬಯಲು ರಂಗ ಮಂದಿರ ನಿರ್ಮಿಸಲಾಗುತ್ತಿದ್ದು, ಅದಕ್ಕೆ ಯಾವುದೇ ಮಂಜೂರಾತಿ ಅಥವಾ ಕಾರ್ಯಾದೇಶ ಪಡೆದುಕೊಂಡಿಲ್ಲ. ಶಿವರಾತ್ರಿ ಆಚರಣೆಯ ಭಾಗವಾಗಿ ಕೆರೆ ಅಂಗಳದಲ್ಲಿ 35 ಅಡಿ ಎತ್ತರದ ಶಿವನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಇದಕ್ಕಾಗಿ ಒಟ್ಟು ಕೆರೆ ಪ್ರದೇಶವನ್ನು ಕಡಿತಗೊಳಿಸಲಾಗಿದೆ ಎಂದು ಅರ್ಜಿದಾರರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.

ಮುಖ್ಯಮಂತ್ರಿ ನಗರೋತ್ಥಾನ ಯೋಜನೆ(Chief Minister Urban Upliftment Scheme)ಯಡಿ ಮಲ್ಲತಹಳ್ಳಿ ಕೆರೆ ಸಮಗ್ರ ಅಭಿವೃದ್ಧಿಗೆ 2019ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದ ಬಳಿಕವೇ ಬಿಬಿಎಂಪಿ ಕಾಮಗಾರಿ ಕೈಗೆತ್ತಿಕೊಂಡಿದೆ. ಅದರಂತೆ ಕಲ್ಯಾಣಿ ಮತ್ತು ಬಯಲು ರಂಗ ಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಕಲ್ಯಾಣಿಯು ಕೆರೆಯಿಂದ 52 ಮೀಟರ್‌ ದೂರದಲ್ಲಿದೆ. ಮಹಾಶಿವರಾತ್ರಿ ಪ್ರಯುಕ್ತ 2023ರ ಫೆ.18ರಂದು ಪ್ರತಿಷ್ಠಾಪಿಸಲಾದ ಶಿವನ ಪ್ರತಿಮೆ ಶಾಶ್ವತ ಸ್ವರೂಪದ್ದಲ್ಲ. ಕೇವಲ ಶಿವರಾತ್ರಿ ಆಚರಣೆ ಪ್ರಯುಕ್ತ ತಾತ್ಕಾಲಿಕವಾಗಿ ಅದನ್ನು ಪ್ರತಿಷ್ಠಾಪಿಸಲಾಗಿತ್ತು. ಅಷ್ಟಕ್ಕೂ ಮೂರ್ತಿಯನ್ನು ಕೆರೆ ಅಂಗಳದಲ್ಲಿ ಪ್ರತಿಷ್ಠಾಪಿಸಲಾಗಿರಲಿಲ್ಲ. ಮುಖ್ಯವಾಗಿ ಮೂರ್ತಿಯು ಪರಿಸರ ಮಾಲಿನ್ಯ ಮುಕ್ತ ವಸ್ತುಗಳಿಂದ ತಯಾರಿಸಲಾಗಿತ್ತು. ಫೆ.20ರಂದು ಅದನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಹೊಸ ರಸ್ತೆ ಅಗೆದ ಟೆಲಿಕಾಂ ಕಂಪನಿ: ವ್ಯಕ್ತಿಯೊಬ್ಬ ಗುಂಡಿಯಲ್ಲೇ ಕುಳಿತು ಪ್ರತಿಭಟನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ