
ಉಡುಪಿ ನವೆಮಬರ್ 3): ಇಲ್ಲಿನ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದಾಗಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ರಾತ್ರಿ ಮಲ್ಪೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದು, ವೇದಿಕೆಯಲ್ಲಿ ಹಾಡುತಿದ್ದಾಗ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಮೃತಪಟ್ಟಿದ್ದರೆಂದು ವೈದ್ಯರು ತಿಳಿಸಿದ್ದಾರೆ.
ವಿಶ್ವನಾಥ್ ಇತ್ತೀಚೆಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ