
ಹುಬ್ಬಳ್ಳಿ (ಫೆ.15): ಸತ್ತನೆಂದು ಊರಿಗೆ ಕರೆತರುವಾಗ ಬದುಕಿದ್ದ ವ್ಯಕ್ತಿ 5 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮತ್ತೆ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಈ ಘಟನೆ ನಡೆದಿತ್ತು. ವೈದ್ಯರು ಸತ್ತನೆಂದು ಘೋಷಿಸಿದ್ದ ಬಳಿಕ ಮನೆಗೆ ಕರೆದುಕೊಂಡು ಹೋಗುತ್ತಿರುವಾಗ ಜೀವಂತವಾಗಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಕಿಮ್ಸ್ ಗೆ ಕುಟುಂಬಸ್ಥರು ದಾಖಲಿಸಿದ್ದರು.
ವ್ಯಕ್ತಿ ಸತ್ತನೆಂದು ತಿಳಿದು ಅಂತ್ಯಸಂಸ್ಕಾರಕ್ಕಾಗಿ ಕುಟುಂಬಸ್ಥರು ಮನೆಯ ಬಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಅವರ ಸ್ನೇಹಿತರು ಶೋಕದ ಬ್ಯಾನರ್‌ಗಳನ್ನು ದಾರಿಯುದ್ದಕ್ಕೂ ಹಾಕಿದ್ದರು. ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿಯೂ ಸತ್ತ ಸುದ್ದಿ ಪ್ರಚಾರವಾಗಿತ್ತು. ಬಂಕಾಪುರ ಪಟ್ಟಣದಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ತೆಗೆಯಲಾಗಿತ್ತು. ಇದೀಗ ಆ ವ್ಯಕ್ತಿ 1 ವಾರದ ನಂತರ ಸಾವನ್ನಪ್ಪಿರುವುದು ಖಚಿತವಾಗಿದೆ.
Haveri: 'ಡಾಬಾ ಬಂತು ಊಟ ಮಾಡ್ತೀಯಾ' ಅಂತಾ ಪತ್ನಿ ಕಣ್ಣೀರಿಟ್ಟಾಗ ಎದ್ದುಕೂತ ಮೃತವ್ಯಕ್ತಿ!
ಘಟನೆ ಹಿನ್ನೆಲೆ:
ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ (45) ಮೃತಪಟ್ಟಿದ್ದಾನೆ ಎಂದು ಖಾಸಗಿ ವೈದ್ಯರು ಘೋಷಿಸಿದ್ದರು. ಹೀಗಾಗಿ ನಂತರ ಆತನ ಪತ್ನಿ ಶೀಲಾ, ಸಂಬಂಧಿಕರ ಜತೆಗೆ ಆಂಬ್ಯುಲೆನ್ಸ್‌ನಲ್ಲಿ ಮೃತದೇಹವನ್ನು ಬಂಕಾಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ "ಡಾಬಾ ಬಂತು ನೋಡು ಊಟ ಮಾಡುತ್ತೀಯಾ?' ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮಾಸ್ತರ್ ಉಸಿರಾಡಿದ್ದ. ಹೀಗಾಗಿ ತಕ್ಷಣ ಆತನನ್ನು ಸಂಬಂಧಿಕರು ಗಾಬರಿಯಾಗಿ ಶಿಗ್ಗಾವಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಅಧಿಕಾರ ಕಳೆದುಕೊಳ್ತಿದಂತೆಯೇ ಕೇಂದ್ರದಿಂದ ಕೇಜ್ರಿಗೆ ಶಾಕ್, ಮನೆ ನವೀಕರಣದ ತನಿಖೆಗೆ ಆದೇಶ
ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢವಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ವೈದ್ಯರು ಕಳುಹಿಸಿಕೊಟ್ಟಿದ್ದರು. ಇದೀಗ ಕಳೆದ ಒಂದು ವಾರದಿಂದ ಕಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಷ್ಣಪ್ಪ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ