ಒರಾಯನ್ ಮಾಲ್ ನಲ್ಲಿ ಪಾಕ್ ಪರ ಘೋಷಣೆ ಕೂಗಿ ಗಲಭೆ ಸೃಷ್ಟಿ

By Web DeskFirst Published Feb 18, 2019, 8:07 AM IST
Highlights

ರಾಜಾಜಿ ನಗರದ ಒರಾಯನ್ ಮಾಲ್‌ನಲ್ಲಿ ಬಿಗುವಿನ ವಾತಾವರಣ ನಿರ್ಮಾಣ ವಾಗಿದ್ದು, ಪಾಕ್ ಪರ ಘೋಷಣೆ ಕೂಗಿ ಪರಾರಿಯಾಗಲು ಯತ್ನಿಸಿದ ಎನ್ನಲಾದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ಬೆಂಗಳೂರು :  ಪಾಕಿಸ್ತಾನದ ಪರ ಘೋಷಣೆ ಕೂಗಿದರು ಎಂದು ಆರೋಪಿಸಿ ಮೂವರು ಯುವಕರ ವಿರುದ್ಧ ಸಾರ್ವಜ ನಿಕರು ಪ್ರತಿಭಟನೆ ನಡೆಸಿದ ಪರಿಣಾಮ ರಾಜಾಜಿ ನಗರದ ಒರಾಯನ್ ಮಾಲ್‌ನಲ್ಲಿ ಬಿಗುವಿನ ವಾತಾವರಣ ನಿರ್ಮಾಣ ವಾಗಿತ್ತು. ಕುಡಿದ ಅಮಲಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಘೋಷಣೆ ಕೂಗಿ ಪರಾರಿಯಾಗಲು ಯತ್ನಿಸಿದ ಎನ್ನ ಲಾದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ಈ ಗಲಾಟೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸುಬ್ರಹ್ಮಣ್ಯನಗರ ಠಾಣೆ ಹೊಯ್ಸಳ ಸಿಬ್ಬಂದಿ, ಕೂಡಲೇ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾಲ್‌ನ ಆವರಣದ ಬಾರ್ ಅಂಡ್ ರೆಸ್ಟೋರೆಂಟ್‌ನ ಶೌಚಾಲಯದಲ್ಲಿ ನನ್ನ ಸ್ನೇಹಿತರಿಗೆ ರಾತ್ರಿ 7.30ರಲ್ಲಿ ಅಪರಿಚಿತರ ಜತೆ ಜಗಳ ವಾಯಿತು. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಆದರೆ ನಾನು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. 

ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಶಂಕಿತ ಆರೋಪಿ ಹೇಳಿಕೆ ನೀಡಿದ್ದಾನೆ. ಈ ಬಗ್ಗೆ ಮಾಲ್‌ನ ಸಿಸಿಟಿವಿ ಕ್ಯಾಮರಾಗಳನ್ನು ವಶಕ್ಕೆ ಪಡೆದು ಪರಿಶೀಲಿ ಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

click me!