ಲೋಕಸಭೆ ಚುನಾವಣೆ 2024: ಗನ್‌ ಇಟ್ಕೊಂಡ ವ್ಯಕ್ತಿ ಸಿದ್ದರಾಮಯ್ಯಗೆ ಹಾರ ಹಾಕಿದ..!

By Kannadaprabha News  |  First Published Apr 9, 2024, 7:01 AM IST

ವಾಹನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇರಿಸಿಕೊಂಡು ಪ್ರಚಾರದ ವಾಹನ ಏರಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರಿಗೆ ಹಾರ ಹಾಕಿದ್ದಾನೆ.


ಬೆಂಗಳೂರು(ಏ.09):  ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಲ್ಸನ್ ಗಾರ್ಡನ್ ಬಳಿ ಸೋಮವಾರ ತೆರೆದ ವಾಹನದಲ್ಲಿ ಪ್ರಚಾರ ಮಾಡುವಾಗ ಭದ್ರತಾ ಲೋಪವಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ವಾಹನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇರಿಸಿಕೊಂಡು ಪ್ರಚಾರದ ವಾಹನ ಏರಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರಿಗೆ ಹಾರ ಹಾಕಿದ್ದಾನೆ.

Tap to resize

Latest Videos

ದಿವಾಳಿಯಾಗಿರುವುದು ರಾಜ್ಯವಲ್ಲ, ಬಿಜೆಪಿಗರ ಬುದ್ದಿ: ಸಿದ್ದರಾಮಯ್ಯ ವಾಗ್ದಾಳಿ

ಹಾರ ಹಾಕುವಾಗ ಸೊಂಟದಲ್ಲಿ ಗನ್ ಇರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಂಗಳಿಗೆ ಝಡ್ ಶ್ರೇಣಿಯ ಭದ್ರತೆ ಇರುತ್ತದೆ. ಮುಖ್ಯಮಂತ್ರಿ ಬಳಿ ಯಾರೇ ಹೋಗಬೇಕಾ ದರೂ ತಪಾಸಣೆ ಮಾಡಿದ ಬಳಿಕವಷ್ಟೇ ಬಿಡಲಾಗುತ್ತದೆ. ಆದರೆ, ಪ್ರಚಾರ ವೇಳೆ ರಿಯಾಜ್ ತನ್ನ ಬಳಿ ಗನ್ ಇರಿಸಿಕೊಂಡ ಸಿಎಂಗೆ ಹಾರ ಹಾಕಿದ್ದಾನೆ. ಹೀಗಾಗಿ ಭದ್ರತಾ ವೈಫಲ್ಯದ ಆರೋಪ ಕೇಳಿ ಬಂದಿದೆ.

ರಿಯಾಜ್ ವಿಚಾರಣೆ:

ಗನ್ ವಿಚಾರ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ನಗರ ಪೊಲೀಸ್ ಆಯಕ್ತರ ಸೂಚನೆಯಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್‌ಕುಮಾರ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಪ್ಪ ಅವರು ರಿಯಾಜ್‌ನನ್ನು ವಿಚಾರಣೆ ಮಾಡಿದ್ದಾರೆ. ರಿಯಾಜ್ ಬಳಿ ಇರುವುದು ಪರವಾನಗಿ ಗನ್. ಚುನಾವಣೆ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ಪರವಾನಗಿ ಶಸ್ತ್ರಾಸ್ತ್ರ ಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ಠೇವಣಿ ಇರಿಸಬೇಕು. ಆದರೆ, ರಿಯಾಜ್ ಪ್ರಾಣ ಬೆದರಿಕೆ ಇರುವ ವಿಚಾರ ತಿಳಿಸಿ ಗನ್ ತನ್ನ ಬಳಿಯೇ ಇರಿಸಿಕೊಂಡಿದ್ದ ಎನ್ನಲಾಗಿದೆ.

ಪೊಲೀಸರ ಮೇಲೆ ಶಿಸ್ತು ಕ್ರಮ?: ಸಿಎಂ ಪ್ರಚಾರ ವೇಳೆ ಭದ್ರತೆಗೆ

ನಿಯೋಜಿತ ಪೊಲೀಸರು ಇದೀಗ ಭದ್ರತಾ ಲೋಪದ ಆರೋಪಕ್ಕೆ ಗುರಿ ಯಾಗಿದ್ದಾರೆ. ರಿಯಾಜ್‌ನನ್ನು ತಪಾಸಣೆ ಮಾಡದೆ ಪ್ರಚಾರ ವಾಹನ ಏರಲು ಅವಕಾಶ ನೀಡಲಾಗಿದೆ. ಹೀಗಾಗಿ ಸಿಎಂ ಭದ್ರತಾ ಕರ್ತವ್ಯಕ್ಕೆ ನಿಯೋಜಿತ ಪೊಲೀಸರಿಗೆ ಶಿಸ್ತು ಕ್ರಮ ಭೀತಿ ಎದುರಾಗಿದೆ. ಈ ಘಟನೆ ಯಿಂದ ಹಿರಿಯ ಪೊಲೀಸ್‌ ಅಧಿಕಾರಿಗಳು ಮುಜುಗರಕ್ಕೆ ಒಳ ಗಾಗಿದ್ದಾರೆ. ಹೀಗಾಗಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮೇಲೆ ಶಿಸ್ತು ಕ್ರಮದ ಸಾಧ್ಯತೆಯಿದೆ.

click me!