
ಮಂಡ್ಯ (ಮೇ.13): ಕನ್ನಡ ಹೋರಾಟಗಾರ ವಾಟಾಳ್(Vatal Nagaraj) ಅವರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ವಿರುದ್ಧ ನೀಡಿದ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಾಟಾಳ್ ಹೇಳಿಕೆಗೆ ಕೆರಳಿದ ಮಂಡ್ಯ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ವಾಟಾಳ್ ನಾಗರಾಜ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 'ವಾಟಾಳ್ ನಾಗರಾಜ್ ಕನ್ನಡ ಹೋರಾಟಗಾರನ ಮುಖವಾಡಲ್ಲಿರುವ ಕಾಂಗ್ರೆಸ್ ಪಕ್ಷದ ಗುಪ್ತ ವಕ್ತಾರ' ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ, ಬಿಎಸ್‌ವೈ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಿತು. ಕಾರ್ಯಕರ್ತರು ವಾಟಾಳ್ ಭಾವಚಿತ್ರ ಹರಿದು ಹಾಕಿದರು. ಕೆಲವರು ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು ಆಕ್ರೋಶ ಹೊರಹಾಕಿದರು.
ಹೋರಾಟ ಮಾಡಿ.. ರಾಜಕಾರಣ ಬೇಡ..!
ವಾಟಾಳರೇ ನೀವು ಕನ್ನಡ ಹೋರಾಟಗಾರರಾಗಿದ್ದರೆ ಕನ್ನಡದ ಪರ ಹೋರಾಟ ಮಾಡಿ. ಆದರೆ ಹೋರಾಟದ ಹೆಸರಲ್ಲಿ ರಾಜಕೀಯ ಮಾಡ ಕಾಂಗ್ರೆಸ್‌ಪಕ್ಷದ ಗುಪ್ತ ವಕ್ತಾರರಂತೆ ವರ್ತಿಸಬೇಡಿ ಎಂದು ಎಚ್ಚರಿಕೆ ನೀಡಿದರು.
ಯಡಿಯೂರಪ್ಪ ಬಗ್ಗೆ ಮಾತಾಡೋ ಮುನ್ನ ಎಚ್ಚರ
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಾಟಾಳ್ ನಾಗರಾಜ್ ಮಂಡ್ಯಕ್ಕೆ ಕಾಲಿಡಬೇಕಾದರೆ ಮೊದಲು ರಾಜ್ಯದ ಜನತೆ ಹಾಗೂ ಯಡಿಯೂರಪ್ಪ ಅವರ ಅಭಿಮಾನಿಗಳ ಕ್ಷಮೆ ಕೇಳಿ ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ