
ಮಂಡ್ಯ (ಫೆ.12): ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಧಾರ್ಮಿಕ ವಿಧಿ-ವಿಧಾನಗಳ ಆಚರಣೆ ಹಾಗೂ ಅಸ್ಥಿ ವಿಸರ್ಜನೆ ಮಾಡುವಾಗ ನೈರ್ಮಲ್ಯ ಕಾಪಾಡುವ ಕ್ರಮಗಳನ್ನು ಕೈಗೊಳ್ಳುವಂತೆ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ಪುರೋಹಿತರಿಗೆ ನಿರ್ದಿಷ್ಟ ದರ ನಿಗದಿಪಡಿಸಬೇಕು. ಅಸ್ಥಿ ವಿಸರ್ಜನೆ ಮಾಡುವ ಸ್ಧಳಗಳಲ್ಲಿ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಂಗೀತ ನಿರ್ದೇಶಕ ಸಾಧು ಕೋಕಿಲ, ನಟ ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್
ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಸ್ಥಳಕ್ಕೆ ಭೇಟಿ ನದಿ ಪಾತ್ರವು ಮಲಿನ ಆಗದಂತೆ ಕ್ರಮ ಕೈಗೊಳ್ಳಬೇಕು. ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಥಪಡಿಸಿ ಹಾಗೂ ನದಿ ಪಾತ್ರವು ಮಲೀನವಾಗದಂತೆ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ